Select Your Language

Notifications

webdunia
webdunia
webdunia
webdunia

ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ

The former chief minister expressed his displeasure regarding the change in textbooks
bangalore , ಗುರುವಾರ, 8 ಜೂನ್ 2023 (21:30 IST)
ಪಠ್ಯ ಪುಸ್ತಕ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಅವರು, ಮಕ್ಕಳ ವಿಚಾರದಲ್ಲಿ ರಾಜ್ಯ ಸರಕಾರ ಚೆಲ್ಲಾಟ ಆಡುತ್ತಿದೆ ಎಂದರು.
 
ಹಿಂದಿನ ಸರಕಾರ ಈಗಾಗಲೇ ಪಠ್ಯ ಬದಲಾವಣೆ ಮಾಡಿದೆ. ಆ ಬಗ್ಗೆ ಸಾಕಷ್ಟು ಗೊಂದಲ ಆಗಿತ್ತು. ಈಗ ಈ ಸರಕಾರವೂ ಅದೇ ದಾರಿಯಲ್ಲಿ ಇದೆ. ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಪಠ್ಯ ಪುಸ್ತಕಗಳನ್ನು ಮುದ್ರಿಸಿ ಶಾಲೆಗಳಿಗೆ ಕಳಿಸಲಾಗಿದೆ. ಇದು ಜನರ ದುಡ್ಡಲ್ಲವೇ? ಎಂದು ಅವರು ಹೇಳಿದರು.ಮಕ್ಕಳಿಗೆ ಪರಿಶುದ್ಧ ವಾತಾವರಣ ಸೃಷ್ಟಿ ಮಾಡಬೇಕು. ಮಕ್ಕಳಿಗೆ ಒಳ್ಳೆಯ ಜ್ಞಾನ ತುಂಬಬೇಕು. ದ್ವಂದ್ವ ಹೇಳಿಕೆಗಳನ್ನು ನೀಡುವ ಮೂಲಕ ಅವರ ಮೇಲೆ ಪರಿಣಾಮ ಬೀಳುವಂತೆ ಮಾಡುವುದು ಬೇಡ. ಸರಕಾರದ ಪ್ರಾರಂಭಿಕ ಹಂತದಲ್ಲಿ ಯಾವ ರೀತಿಯ ಗೊಂದಲ ಬಿತ್ತನೆ ಮಾಡಿದರೆ ಹೇಗೆ? ಇನ್ನೂ ಐದು ವರ್ಷದ ಕಥೆ ಏನು? ಎನ್ನುವುದು ನನ್ನ ಪ್ರಶ್ನೆಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ