Select Your Language

Notifications

webdunia
webdunia
webdunia
webdunia

ಅಂಗಡಿಯಲ್ಲಿ ಚಿಪ್ಸ್ ಮುಗಿದಿದೆಂದು ಗೋಡೌನ್‌ಗೆ ಕರೆದುಕೊಂಡು ಹೋಗಿ ಬಾಲಕಿಗೆ ಲೈಂಗಿಕ ದೌರ್ಜನ್ಯ

ಬೆಂಗಳೂರು ಅತ್ಯಾಚಾರ ಪ್ರಕರಣ

Sampriya

ಬೆಂಗಳೂರು , ಶುಕ್ರವಾರ, 4 ಜುಲೈ 2025 (15:24 IST)
ಬೆಂಗಳೂರು: ತಿಂಡಿ ಖರೀದಿಸಲು ಅಂಗಡಿಗೆ ಹೋದ 8 ವರ್ಷದ ಬಾಲಕಿ ಮೇಲೆ ಅಂಗಡಿ ಮಾಲೀಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. 

ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆ ನಂತರ, ಆರೋಪಿಯನ್ನು ಬಂಧಿಸಲಾಯಿತು ಎಂದಿದ್ದಾರೆ.

ಪೊಲೀಸರ ಪ್ರಕಾರ, ಹುಡುಗಿ ಚಿಪ್ಸ್ ಪ್ಯಾಕೆಟ್ ಖರೀದಿಸಲು ತನ್ನ ಮನೆಯ ಹತ್ತಿರದ ಅಂಗಡಿಗೆ ಹೋಗಿದ್ದಳು. ಆಗ ಅಂಗಡಿಯಲ್ಲಿದ್ದ 25 ವರ್ಷದ ವ್ಯಕ್ತಿ, ಚಿಪ್ಸ್ ಪ್ಯಾಕೆಟ್ ಅನ್ನು ಪಕ್ಕದಲ್ಲಿರುವ ಗೋಡೌನ್‌ನಿಂದ ತರಬೇಕೆಂದು ಹೇಳಿದ್ದಾನೆ.

ಅಲ್ಲೇ ಚಿಪ್ಸ್ ಕೊಡುವುದಾಗಿ ಹೇಳಿ ಗೋಡೌನ್‌ಗೆ ಕರೆದುಕೊಂಡ ಹೋದ ಆರೋಪಿ, ಬಾಲಕಿಯ ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿ ಚಿಪ್ಸ್ ಪ್ಯಾಕೆಟ್ ತೆಗೆದುಕೊಂಡು ಮನೆಗೆ ಬಂದು ಅಳಲು ಪ್ರಾರಂಭಿಸಿದಳು. ಆಕೆಯ ಚಿಕ್ಕಮ್ಮ ಕಾರಣ ಕೇಳಿದಾಗ, ಅವಳು ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ. ಪೋಷಕರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಯಿತು ಎಂದು ಅವರು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಾಡದೇವತೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್‌