Webdunia - Bharat's app for daily news and videos

Install App

ಅಂಗಡಿಯಲ್ಲಿ ಚಿಪ್ಸ್ ಮುಗಿದಿದೆಂದು ಗೋಡೌನ್‌ಗೆ ಕರೆದುಕೊಂಡು ಹೋಗಿ ಬಾಲಕಿಗೆ ಲೈಂಗಿಕ ದೌರ್ಜನ್ಯ

Sampriya
ಶುಕ್ರವಾರ, 4 ಜುಲೈ 2025 (15:24 IST)
ಬೆಂಗಳೂರು: ತಿಂಡಿ ಖರೀದಿಸಲು ಅಂಗಡಿಗೆ ಹೋದ 8 ವರ್ಷದ ಬಾಲಕಿ ಮೇಲೆ ಅಂಗಡಿ ಮಾಲೀಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. 

ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆ ನಂತರ, ಆರೋಪಿಯನ್ನು ಬಂಧಿಸಲಾಯಿತು ಎಂದಿದ್ದಾರೆ.

ಪೊಲೀಸರ ಪ್ರಕಾರ, ಹುಡುಗಿ ಚಿಪ್ಸ್ ಪ್ಯಾಕೆಟ್ ಖರೀದಿಸಲು ತನ್ನ ಮನೆಯ ಹತ್ತಿರದ ಅಂಗಡಿಗೆ ಹೋಗಿದ್ದಳು. ಆಗ ಅಂಗಡಿಯಲ್ಲಿದ್ದ 25 ವರ್ಷದ ವ್ಯಕ್ತಿ, ಚಿಪ್ಸ್ ಪ್ಯಾಕೆಟ್ ಅನ್ನು ಪಕ್ಕದಲ್ಲಿರುವ ಗೋಡೌನ್‌ನಿಂದ ತರಬೇಕೆಂದು ಹೇಳಿದ್ದಾನೆ.

ಅಲ್ಲೇ ಚಿಪ್ಸ್ ಕೊಡುವುದಾಗಿ ಹೇಳಿ ಗೋಡೌನ್‌ಗೆ ಕರೆದುಕೊಂಡ ಹೋದ ಆರೋಪಿ, ಬಾಲಕಿಯ ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿ ಚಿಪ್ಸ್ ಪ್ಯಾಕೆಟ್ ತೆಗೆದುಕೊಂಡು ಮನೆಗೆ ಬಂದು ಅಳಲು ಪ್ರಾರಂಭಿಸಿದಳು. ಆಕೆಯ ಚಿಕ್ಕಮ್ಮ ಕಾರಣ ಕೇಳಿದಾಗ, ಅವಳು ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ. ಪೋಷಕರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಯಿತು ಎಂದು ಅವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಯಾರು ಅವರು ಎಷ್ಟು ಪವರ್ ಫುಲ್ ಗೊತ್ತಾ

ಹನಿಮೂನ್ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್: ಸೋನಂ ಎರಡನೇ ಮದುವೆ

Arecanut price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು ಏರಿಕೆ

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ