Publish Date: Sat, 13 Oct 2018 (14:33 IST)
Updated Date: Sat, 13 Oct 2018 (14:35 IST)
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಸಡಗರ ಹಾಗೂ ಸಂಭ್ರಮದಿಂದ ನವರಾತ್ರಿ ಉತ್ಸವ ಆಚರಣೆ ಮಾಡಲಾಗುತ್ತಿದೆ.
ವಿಜಯಪುರದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಕೆಲವೆಡೆ ದೇವಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ವಿಜಯಪುರ ನಗರದ ಬಿಎಲ್ ಡಿಈ ಸಂಸ್ಥೆಯ ಪಿಯು ಮತ್ತು ಪದವಿ ಸಂಯುಕ್ತ ಮಹಾವಿದ್ಯಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿತ್ತು.
ವಿಜಯಪುರ ನಗರದ ಐತಿಹಾಸಿಕ ಸ್ಮಾರಕ ಉಪ್ಪಲಿಬುರುಜ್ ಬಳಿಯಿರುವ ಬಿಎಲ್ ಡಿಈ ಸಂಸ್ಥೆಯ ಶಿಕ್ಷಣ ಸಂಸ್ಥೆಯ
ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರಿಗಾಗಿ ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿತ್ತು.
ಬಣ್ಣ ಬಣ್ಣದುಡುಗೆ ತೊಟ್ಟು, ನರ್ತಿಸಿ ಸಂಭ್ರಮಿಸಿದ ಕಾಲೇಜಿನ ವಿದ್ಯಾರ್ಥಿನಿಯರು ಗಮನ ಸೆಳೆದರು. ಖುಷಿಯಿಂದ ನವರಾತ್ರಿ ಉತ್ಸವ ಆಚರಣೆಯಲ್ಲಿ ಪಾಲ್ಗೊಂಡರು.