ಗೋಕರ್ಣ ದೇವಸ್ಥಾನವನ್ನು ಸರಕಾರ ವಶಕ್ಕೆಪಡೆದುಕೊಳ್ಳುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟಪಡಿಸಿದರು.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕರ್ಣ ದೇವಸ್ಥಾನವನ್ನು ಸರ್ಕಾರದ ವಶಪಡಿಸಿಕೊಳ್ಳುವ ಕುರಿತಂತೆ ದಾಖಲೆಗಳ ಪರಿಶೀಲನೆ ಆರಂಭವಾಗಿದೆ. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಹೆಚ್ಚಿಗೆ ಮಾತನಾಡಲು ಬರುವುದಿಲ್ಲ. ಸೂಕ್ತ ಸಮಯದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.
ಪ್ರಸ್ತುತ ಗೋಕರ್ಣ ದೇವಸ್ಥಾನದ ನಿರ್ವಹಣೆಯನ್ನು ಹೊಸನಗರದ ರಾಮಚಂದ್ರಪುರಮಠ ವಹಿಸಿಕೊಂಡಿದೆ. ಪ್ರಸ್ತುತ ನಿರ್ವಹಣೆ ಉತ್ತಮವಾಗಿದೆ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು.
ಗೋಕರ್ಣ ದೇವಸ್ಥಾನವನ್ನು ಸರಕಾರ ವಶಪಡಿಸಿಕೊಳ್ಳುವುದಕ್ಕೆ ಭಕ್ತರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದು, ಯಾವುದೇ ಕಾರಣಕ್ಕೂ ದೇವಸ್ಥಾನವನ್ನು ಸರಕಾರ ವಶಪಡೆಯದಂತೆ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ