Webdunia - Bharat's app for daily news and videos

Install App

ಗೋಕರ್ಣ ದೇವಸ್ಥಾನ ಸರಕಾರ ವಶಕ್ಕೆ ಪಡೆಯಲ್ಲ: ಸಚಿವ ಲಮಾಣಿ

Webdunia
ಗುರುವಾರ, 6 ಅಕ್ಟೋಬರ್ 2016 (19:05 IST)
ಗೋಕರ್ಣ ದೇವಸ್ಥಾನವನ್ನು ಸರಕಾರ ವಶಕ್ಕೆಪಡೆದುಕೊಳ್ಳುವ ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಸ್ಪಷ್ಟಪಡಿಸಿದರು. 
 
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕರ್ಣ ದೇವಸ್ಥಾನವನ್ನು ಸರ್ಕಾರದ ವಶಪಡಿಸಿಕೊಳ್ಳುವ ಕುರಿತಂತೆ ದಾಖಲೆಗಳ ಪರಿಶೀಲನೆ ಆರಂಭವಾಗಿದೆ. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಹೆಚ್ಚಿಗೆ ಮಾತನಾಡಲು ಬರುವುದಿಲ್ಲ. ಸೂಕ್ತ ಸಮಯದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು. 
 
ಪ್ರಸ್ತುತ ಗೋಕರ್ಣ ದೇವಸ್ಥಾನದ ನಿರ್ವಹಣೆಯನ್ನು ಹೊಸನಗರದ ರಾಮಚಂದ್ರಪುರಮಠ ವಹಿಸಿಕೊಂಡಿದೆ. ಪ್ರಸ್ತುತ ನಿರ್ವಹಣೆ ಉತ್ತಮವಾಗಿದೆ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು.
 
ಗೋಕರ್ಣ ದೇವಸ್ಥಾನವನ್ನು ಸರಕಾರ ವಶಪಡಿಸಿಕೊಳ್ಳುವುದಕ್ಕೆ ಭಕ್ತರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದು, ಯಾವುದೇ ಕಾರಣಕ್ಕೂ ದೇವಸ್ಥಾನವನ್ನು ಸರಕಾರ ವಶಪಡೆಯದಂತೆ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಗ್ಯಾರಂಟಿಯಿಲ್ಲ: ಆರ್ ಅಶೋಕ್

ಸಿಗಂದೂರು ಸೇತುವೆ ಉದ್ಘಾಟನೆಗೆ ಕರೆದಿಲ್ಲ: ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ

ನೀವು ನಂ1 ಮಿನಿಸ್ಟರ್ ಅಂತ ಸುರ್ಜೇವಾಲ ನನ್ನ ಹೊಗಳಿದ್ದಾರೆ: ಜಮೀರ್ ಅಹ್ಮದ್

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments