ಅತೃಪ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧ- ಸಿಎಂ ಭರವಸೆ

ಮಂಗಳವಾರ, 12 ಫೆಬ್ರವರಿ 2019 (11:25 IST)
ಬೆಂಗಳೂರು : ಅತೃಪ್ತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ರೆಡಿ ಎಂದು ಸಿಎಂ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ನಾಗೇಂದ್ರ ಸೇರಿದಂತೆ ಇತರೆ ಅತೃಪ್ತ ಶಾಸಕರಿಗೆ  ಸಿಎಂ ಕುಮಾರಸ್ವಾಮಿ ಖುದ್ದು ತಾವೇ ಕರೆ ಮಾಡಿ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿ, ವಾಪಾಸ್ ಬರಲು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. ಹಾಗೇ ಇದಕ್ಕೆ ಕೆ.ಸಿ.ವೇಣುಗೋಪಾಲ್ ಕೂಡ ಬೇಡಿಕೆ ಈಡೇರಿಕೆಗೆ ಸಮ್ಮತಿ ನೀಡಿದ್ದಾರೆ ಎನ್ನಲಾಗಿದೆ.

 

ಈ ಹಿನ್ನಲೆಯಲ್ಲಿ ಇಂದು ಅಥವಾ ನಾಳೆ ಅತೃಪ್ತ ಶಾಸಕರು ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

 ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಅಂಬಾನಿ ಕುಟುಂಬದಲ್ಲಿ ಮತ್ತೊಂದು ವೈಭವೋಪೇತ ಮದುವೆ