Publish Date: Tue, 30 Jun 2020 (18:31 IST)
Updated Date: Tue, 30 Jun 2020 (18:32 IST)
ರಾಜ್ಯದ ಈ ಜಿಲ್ಲೆಯಲ್ಲಿ ಇನ್ಮುಂದೆ ರಾತ್ರಿಯಿಂದ ಬೆಳಗ್ಗೆವರೆಗೂ ಕರ್ಫ್ಯೂ ಜಾರಿಮಾಡಲಾಗಿದೆ.
ಈ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಿ ಡಿಸಿಎಂ ಆದೇಶ ಹೊರಡಿಸಿದ್ದಾರೆ.
ಕೊರೊನಾ ವೈರಸ್ ತಡೆ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಸಂಜೆ ಆರರಿಂದ ಬೆಳಗ್ಗೆ ಆರು ಗಂಟೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ.
ಹೀಗಂತ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಇದೇ ವೇಳೆ ರಸ್ತೆ ಬದಿ ಮಾಡುವ ಆಹಾರ ಪದಾರ್ಥಗಳ ಮಾರಾಟಕ್ಕೆ ನಿಷೇಧ ಹೇರಿದ್ದಾರೆ.
ಕೊರೊನಾ ತಡೆಗೆ ಫ್ಲೈಯಿಂಗ್ ಸ್ಕ್ವಾಡ್ ನೇಮಕ ಮಾಡಲಾಗಿದೆ. ಅವರು ಮಾರುಕಟ್ಟೆ, ಹೋಟೆಲ್ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ನಿಗಾ ವಹಿಸಲಿದ್ದಾರೆ ಎಂದಿದ್ದಾರೆ.