Publish Date: Sat, 22 Jul 2017 (15:26 IST)
Updated Date: Sat, 22 Jul 2017 (15:28 IST)
ರಾಜ್ಯ ಸರಕಾರ ಕನ್ನಡ ಪರ ಚಳುವಳಿಗಾರರ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಂಸದ ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.
ಕರವೇ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಕನ್ನಡ ಭಾಷೆ, ರಾಜ್ಯಕ್ಕೆ ಅಪಮಾನವಾದಾಗ ಕನ್ನಡ ಪರ ಹೋರಾಟಗಾರರು ಹೋರಾಟ ಮಾಡುವುದು ಹಕ್ಕು ಎಂದು ತಿಳಿಸಿದ್ದಾರೆ.
ರಾಜ್ಯಕ್ಕಾಗಿ ಭಾಷೆಗಾಗಿ ಹೋರಾಟ ಮಾಡುವಂತಹ ಕಾರ್ಯಕರ್ತರ ಮೇಲೆಯೇ ಕೇಸ್ ಹಾಕಿದರೆ ಹೇಗೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಕರವೇ ಕಾರ್ಯಕರ್ತರ ಮೇಲೆ ದಾಖಲಾದ ಕೇಸ್‌ಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕನ್ನಡ ಪರ ಹೋರಾಟಗಾರರ ಧ್ವನಿ ಹತ್ತಿಕ್ಕಿ ದಮನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಹೋರಾಟ ದಮನ ಮಾಡಲು ಪ್ರಯತ್ನಿಸಿದಲ್ಲಿ ಸರಕಾರ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಜೆಡಿಎಸ್ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.