Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ಇದ್ರೂ ಈ ಕೆಲಸಕ್ಕೆ ಗ್ರೀನ್ ಸಿಗ್ನಲ್ ನೀಡಿದ ಸರಕಾರ

ಲಾಕ್ ಡೌನ್ ಇದ್ರೂ ಈ ಕೆಲಸಕ್ಕೆ ಗ್ರೀನ್ ಸಿಗ್ನಲ್ ನೀಡಿದ ಸರಕಾರ
ಧಾರವಾಡ , ಶುಕ್ರವಾರ, 17 ಏಪ್ರಿಲ್ 2020 (19:55 IST)
ಕೊರೊನಾ ಎರಡನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವಾಗಲೇ ಸರಕಾರ ನಿರ್ಮಾಣ ಕಾಮಗಾರಿ ನಡೆಸೋರಿಗೆ, ಕಾರ್ಮಿಕರಿಗೆ ಶುಭ ಸುದ್ದಿ ನೀಡಿದೆ.

ಎರಡನೇ ಹಂತದ ಲಾಕ್‍ಡೌನ್ ಅವಧಿ ಮೇ.3 ರ ವರೆಗೂ ವಿಸ್ತರಣೆ ಆಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಬಾರದು. ಕಾರ್ಮಿಕರಿಗೂ ಕನಿಷ್ಠ ಜೀವನ ನಿರ್ವಹಣೆ ಮಾಡಲು ಉದ್ಯೋಗ ಸಿಗಬೇಕು ಎನ್ನುವ ಆಶಯದೊಂದಿಗೆ ಕಂಟೈನ್‍ಮೆಂಟ್ ಪ್ರದೇಶ ಹೊರತುಪಡಿಸಿ ಧಾರವಾಡ ಜಿಲ್ಲೆಯಲ್ಲಿ ಕಟ್ಟಡ, ರಸ್ತೆ, ಸೇತುವೆ ಮೊದಲಾದ ನಿರ್ಮಾಣ ಕಾಮಗಾರಿಗಳನ್ನು ಪ್ರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು.

ಗುತ್ತಿಗೆದಾರರು ಕಾರ್ಮಿಕರಿಗೆ ವಸತಿ, ಕ್ಯಾಂಪ್‍ಗಳನ್ನು ನಿರ್ಮಿಸಿ ಅಲ್ಲಿಯೇ ಊಟ, ಉಪಾಹಾರ ಸೌಕರ್ಯಗಳನ್ನು ಒದಗಿಸಬೇಕು.  ಪ್ರತಿದಿನ ಕಾರ್ಮಿಕರು ತಮ್ಮ ಸ್ಥಳಗಳಿಗೆ ಸಂಚರಿಸಲು ಅವಕಾಶ ಇರುವುದಿಲ್ಲ ಎಂದು ಬೃಹತ್ ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

 ನಿರ್ಮಾಣ ಕಾಮಗಾರಿಗಳನ್ನು ಅನುಮತಿ ಪಡೆದು ಕೈಗೊಳ್ಳಬಹುದು. ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿಯೇ ವಸತಿ ಕಲ್ಪಿಸಬೇಕು. ಸಾಮಾಜಿಕ ಅಂತರ, ಶುಚಿತ್ವ ಕಾಪಾಡಬೇಕು. ಪ್ಲಂಬರ್‍ಗಳು, ಮೋಟಾರ್ ಮೆಕ್ಯಾನಿಕ್‍ಗಳು ಹಾಗೂ ಪೂರಕ ಚಟುವಟಿಕೆಗಳ ಕಾರ್ಮಿಕರಿಗೂ ಈ ವಿನಾಯಿತಿ ಅನ್ವಯಿಸುತ್ತದೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ನಕಲಿ ಪಾಸ್ ಹೊಂದಿದ್ದರೆ ನಿಮಗೆ ಕಾದಿದೆ ಆಪತ್ತು