Publish Date: Mon, 15 Jun 2026 (14:30 IST)
Updated Date: Mon, 15 Jun 2026 (14:32 IST)
ಬೆಂಗಳೂರು: ನಮ್ಮ ಸರ್ಕಾರ ಪ್ರೀತಿಯಿಂದ ನೀಡಿರುವ ಯಾವುದೇ ಗ್ಯಾರಂಟಿ ಯೋಜನಗೆಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲಾಗುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಪುನರುಚ್ಚರಿಸಿದರು.
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವೆಯಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಇರುವುದೇ ಟೀಕೆ ಮಾಡಲು. ನಾವು ಏನೇ ಒಳ್ಳೆಯದು ಮಾಡಲು ಮುಂದಾದರೂ ಅದಕ್ಕೆ ಅಡ್ಡಗಾಲು ಹಾಕುವುದಕ್ಕೆ ವಿರೋಧ ಪಕ್ಷಗಳಿರುವುದು. ಅವರ ಕೈಯಲ್ಲಿ ಆಗದಿದ್ದ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಕೌಂಟರ್ ನೀಡಿದರು.
ಇನ್ನೂ ಆರಂಭದಲ್ಲಿ ಕೆಲವು ಫಲಾನುಭವಿಗಳು ಬೇರೆಯವರ ದೂರವಾಣಿ ಸಂಖ್ಯೆ ಹಾಗೂ ಇತರೆ ಮಾಹಿತಿ ನೀಡಿದ್ದಾರೆ. ಬೇರೆಯವರ ಖಾತೆಗೆ ಹಣ ಹೋಗುತ್ತಿರುವ ಬಗ್ಗೆ ನಮಗೆ ಮಾಹಿತಿ ಇದೆ. ಫಲಾನುಭವಿಗಳ ಖಾತೆಗೆ ಹಣ ಹೋಗುವಂತೆ ಮಾಡುವುದು ಸರ್ಕಾರದ ಉದ್ದೇಶ ಎಂದು ಸ್ಪಷ್ಟನೆ ನೀಡಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ