Webdunia - Bharat's app for daily news and videos

Install App

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

Sampriya
ಶನಿವಾರ, 23 ಆಗಸ್ಟ್ 2025 (18:52 IST)
ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧದ ಷಡ್ಯಂತರ ನಡೆಯುತ್ತಿದೆ ಎಂದು ನಾವು ಹೇಳಿದ್ದು ಈಗ ನಿಜವಾಗಿದೆ. ದೂರುದಾರ ಮುಸುಕುದಾರಿಯ ಬಂಧನ ಸತ್ಯದ ಮೇಲೆ ಬೆಳಕು ಚೆಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.

ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಮಾಸ್ಕ್‌ಮ್ಯಾನ್ ಬಂಧನವಾಗುತ್ತಿದ್ದ ಹಾಗೇ ಅವರು ಪ್ರತಿಕ್ರಿಯಿಸಿದ್ದು, ಇದನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. 

ಕಪೋಲ ಕಲ್ಪಿತ ದೂರು ನೀಡಿ ಸಿಕ್ಕಿಬಿದ್ದಿರುವ ಈತನ ಹಿಂದಿರುವ ಶಕ್ತಿಗಳು ಯಾವುದು? ಷಡ್ಯಂತ್ರ ರೂಪಿಸಿದ ವಿಕೃತಿಗಳು ಯಾರು? ಇವರೆಲ್ಲರ ಮುಖವಾಡಗಳು ಬಯಲಾಗಬೇಕಿದೆ.

ಇಡೀ ರಾಜ್ಯದ ಹಾಗೂ ದೇಶದ ಗಮನವನ್ನು ಕೇಂದ್ರೀಕರಿಸುವಂತೆ ಮಾಡಿ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರ ಪವಿತ್ರ ಧರ್ಮಸ್ಥಳವನ್ನು ಅಪವಿತ್ರ ಗೊಳಿಸಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಿದೆ.

ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರಗೊಂಡ ಈ ಅಪಪ್ರಚಾರದ ಹಿಂದೆ ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ ತಳ್ಳಿಹಾಕಲಾಗದು. ಈ ಪ್ರಕರಣವನ್ನು ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರವೆಂದು ಸೀಮಿತಗೊಳಿಸದೆ, ಇದು ಭಾರತೀಯರ ಭಾವನೆಗಳು ಹಾಗೂ ಪರಂಪರೆಯ ಮೇಲೆ ನಡೆದ ವ್ಯವಸ್ಥಿತ ಪಿತೂರಿ ಎಂದು ಪರಿಗಣಿಸಿ, ರಾಜ್ಯ ಕಾಂಗ್ರೆಸ್‌ ಸರ್ಕಾರ ಎಡ ಪಂಥೀಯರ ಒತ್ತಾಯಕ್ಕೆ ಮಣಿದು ಹೇಗೆ SIT ರಚಿಸಿ ತನಿಖೆ ನಡೆಸಿತೋ, ಅದೇ ಮಾದರಿಯಲ್ಲಿ ಧರ್ಮಸ್ಥಳದ ವಿರುದ್ಧ  ಷಡ್ಯಂತ್ರ ನಡೆಸಿದವರ ವಿರುದ್ಧವೂ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಲಿ ಎಂದು ಆಗ್ರಹಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಧರ್ಮಸ್ಥಳ ಬುರುಡೆ ರಹಸ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಮುಂದಿನ ಸುದ್ದಿ
Show comments