Publish Date: Tue, 04 Apr 2023 (13:56 IST)
Updated Date: Tue, 04 Apr 2023 (13:58 IST)
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದರೆ ಡಿ.ಕೆ.ಶಿವಕುಮಾರ್ ಅವರನ್ನು ಹೈಕಮಾಂಡ್ ಸಿಎಂ ಮಾಡಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಾನು ಹಾಗೆ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಆ ರೀತಿ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಿಎಂ ಆಯ್ಕೆ ಮಾಡುತ್ತೇವೆ ಎಂದು ನಾನು ಹೇಳಿದ್ದೇನೆ. ನಾನು ಆಕಾಂಕ್ಷಿ, ಅವರು (ಡಿ.ಕೆ.ಶಿವಕುಮಾರ್) ಕೂಡ ಆಕಾಂಕ್ಷಿ ಎಂದಷ್ಟೆ ಹೇಳಿದ್ದೇನೆ. ಬೇರೆದೆಲ್ಲ ನಾನು ಹೇಳಿಲ್ಲ. ಇದು ಶುದ್ಧ ಸುಳ್ಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.