Publish Date: Thu, 23 Mar 2023 (21:12 IST)
Updated Date: Thu, 23 Mar 2023 (19:36 IST)
ವಿವಿಧ ಬೇಡಿಕೆ ಈಡೇರಿಕೆಗಳಿಗೆ ಆಗ್ರಹಿಸಿ ನಾಳೆ ಶುಕ್ರವಾರ ಮಾರ್ಚ್ 24ರಂದು ಮುಷ್ಕರ ನಡೆಸಲು ಸಜ್ಜಾಗಿದ್ದ 'ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ'ಗೆ ಹಿನ್ನಡೆಯಾಗಿದೆ. ರಾಜ್ಯದ ಸರ್ಕಾರದ ಭರವಸೆ ಬಳಿಕವು ಶುಕ್ರವಾರ ಮುಷ್ಕರ ನಡೆಸಿಯೇ ತಿರುತ್ತೇವೆ ಎಂದು ಸಮಿತಿ ತಿಳಿಸಿತ್ತು. ಆದರೆ ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ ತಡೆಯಾಜ್ಞೆ ಆದೇಶ ಹೊರಡಿಸಿದೆ. ಸದ್ಯ ಪಿಯುಸಿ ಸೇರಿದಂತೆ ವಿವಿಧ ತರಗತಿ ಮಕ್ಕಳು ಪರೀಕ್ಷೆ ಎದುರಿಸುತ್ತಿದ್ದಾರೆ. ಮುಷ್ಕರದಿಂದ ಸಾರ್ವಜನಿಕರಿಗೂ ತೊಂದರೆಯಾಗಲಿದೆ ಎಂದು ಹೈಕೋರ್ಟ್ ಹೇಳಿದೆ.