Publish Date: Sat, 21 Jul 2018 (20:59 IST)
Updated Date: Sat, 21 Jul 2018 (21:03 IST)
ರೈತರ ಸಂಪೂರ್ಣ ಸಾಲಮನ್ನಾಗೆ ಆಗ್ರಹಿಸಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಪ್ರತಿಭಟನೆ ನಡೆಸಲಾಗಿದೆ.
ಕೊಪ್ಪಳ ತಾಲೂಕಿನ ಹುಲಗಿ ಕ್ರಾಸ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಸ್ವರಾಜ್ ಇಂಡಿಯಾ ಪಾರ್ಟಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.
ಸಾವಿರಾರು ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿದರು. ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆಯನ್ನು, ರಸ್ತೆ ತಡೆಯನ್ನು ನಡೆಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ರೈತ ವಿರೋಧಿ ಎಂದು ಧಿಕ್ಕಾರ ಕೂಗಿದರು.
ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರ ಜಿಲ್ಲೆಗಳ ರೈತರು, ಹೋರಾಟದಲ್ಲಿ ಭಾಗಿಯಾಗಿದ್ದರು. ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.