Webdunia - Bharat's app for daily news and videos

Install App

ಪತ್ನಿ, ಮಕ್ಕಳಿದ್ದ ಮನೆಗೆ ಪತಿಯಿಂದ ಬೆಂಕಿ

Webdunia
ಶನಿವಾರ, 19 ನವೆಂಬರ್ 2022 (20:53 IST)
ಮಕ್ಕಳನ್ನು ನೋಡಲು ಬಿಡದಿದ್ದಕ್ಕೆ ಮಡದಿ ಮಕ್ಕಳನ್ನೂ ಸೇರಿದಂತೆ ಇಡೀ ಮನೆಗೆ ಪಾಪಿ ಪತಿ ಬೆಂಕಿ ಹಚ್ಚಿದ ಘಟನೆ ಹಾಸನ ತಾಲ್ಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯೊಳಗಿದ್ದ ಪತ್ನಿ ಹಾಗೂ ಆಕೆಯ ಇಬ್ಬರು ಗಂಡು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ತಾಯಿ ಗೀತಾ ಹಾಗೂ ಆಕೆಯ ಮಕ್ಕಳಾದ ಚಿರಂತನ್, ನಂದನ್​​​​ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಜಮೀನು ವಿಚಾರಕ್ಕೆ ಪತಿ ಅಂಕನಹಳ್ಳಿಯ ರಂಗಸ್ವಾಮಿ ಹಾಗೂ ಗೀತಾಳ ನಡುವೆ ಜಗಳವಾಗಿತ್ತು. ಈ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ನಾಲ್ಕು ತಿಂಗಳಿನಿಂದ ಪತಿಯಿಂದ ಪ್ರತ್ಯೇಕವಾಗಿ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ವಾಸವಿದ್ಲು. ರಂಗಸ್ವಾಮಿ ಆಗಾಗ್ಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದ. ನಿನ್ನೆ ಮಕ್ಕಳನ್ನು ನೋಡಲು ಬಂದಿದ್ದಾನೆ. ಇದಕ್ಕೆ ಪತ್ನಿ ಗೀತಾ ವಿರೋಧ ವ್ಯಕ್ತಪಡಿಸಿದ್ದಾಳೆ. ಇದಕ್ಕೆ ಕೋಪಗೊಂಡ ಆತ ಮಧ್ಯರಾತ್ರಿ ಪೆಟ್ರೋಲ್ ತಂದು ಮನೆಗೆ ಸುರಿದು ಬೆಂಕಿ ಹಚ್ಚಿದ್ದಾನೆ. ಸ್ಥಳೀಯರ ನೆರವಿನಿಂದ ಪ್ರಾಣಾಪಾಯದಿಂದ ಗೀತಾ ಹಾಗೂ ಮಕ್ಕಳು ಪಾರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸಂಪೂರ್ಣ ಕರಕಲಾಗಿವೆ. ಆರೋಪಿ ರಂಗಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments