Select Your Language

Notifications

webdunia
webdunia
webdunia
webdunia

ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಸೀಳಿದ ಪತಿ!

webdunia
ಹಾಸನ , ಮಂಗಳವಾರ, 16 ಆಗಸ್ಟ್ 2022 (13:09 IST)
ಹಾಸನ : ಕೋರ್ಟ್ ಆವರಣದಲ್ಲೇ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆ ಮಾಡಲು ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

ಚೈತ್ರಾ (32) ಕೊಲೆಯಾದ ಮಹಿಳೆಯಾಗಿದ್ದು, ಶಿವಕುಮಾರ್ ಕೊಲೆ ಆರೋಪಿಯಾಗಿದ್ದಾನೆ. ಹೊಳೆನರಸೀಪುರ ತಾಲ್ಲೂಕಿನ, ತಟ್ಟೆಕೆರೆ ಗ್ರಾಮದ ಶಿವಕುಮಾರ್ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ, ನುಗ್ಗೇಹಳ್ಳಿ ಹೋಬಳಿ ಅವೇರಹಳ್ಳಿ ಗ್ರಾಮದ ಚೈತ್ರಾ ಕಳೆದ 7 ವರ್ಷದ ಹಿಂದೆ ಮದುವೆಯಾಗಿದ್ದರು.

ದಂಪತಿಗೆ ಎರಡು ಹೆಣ್ಣುಮಕ್ಕಳಿದ್ದು, ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಮೂರು ವರ್ಷಗಳ ಹಿಂದೆ ಶಿವಕುಮಾರ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದನು. 

ಚೈತ್ರಾ ಜೀವನಾಂಶ ಕೋರಿ ಕೋರ್ಟ್ ಮೆಟ್ಟಿಲೇರಿದ್ದಳು. ಇಂದು ಹೊಳೆನರಸೀಪುರದ ನ್ಯಾಯಾಲಯದಲ್ಲಿ ಲೋಕ ಅದಾಲತ್ ನಡೆದಿದ್ದು, ಇಲ್ಲಿ ನ್ಯಾಯಧೀಶರು ದಂಪತಿ ಮನವೊಲಿಸಿ ಒಂದಾಗಿ ಬಾಳುವಂತೆ ತಿಳಿ ಹೇಳಿದ್ದರು. ನಂತರ ಇಬ್ಬರು ಪರಸ್ಪರ ಮಾತನಾಡಿಕೊಂಡು ಬರುವಂತೆ ಕಳುಹಿಸಿದ್ದರು.

ಈ ವೇಳೆ ಚೈತ್ರಾ ಮಗಳನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದಾಳೆ. ಆಕೆಯನ್ನು ಹಿಂಬಾಲಿಸಿ ಹೋದ ಶಿವಕುಮಾರ್ ಶೌಚಾಲಯದಲ್ಲೇ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಚೈತ್ರಾ ಕುಸಿದು ಬಿದ್ದು ರಕ್ತಸ್ರಾವದಿಂದ ಒದ್ದಾಡುತ್ತಿದ್ದನ್ನು ಕಂಡ ವಕೀಲರು ಹಾಗೂ ಸಾರ್ವಜನಿಕರು ಕೂಡಲೇ ಆಕೆಯನ್ನು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಿ, ತಪ್ಪಿಸಿಕೊಂಡು ಓಡುತ್ತಿದ್ದ ಶಿವಕುಮಾರ್ನ ಬೆನ್ನತ್ತಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಕಾಮಾಲೆ ರೋಗ ಬಂದಿದೆ : ಸಿದ್ದರಾಮಯ್ಯ