Publish Date: Tue, 06 Sep 2022 (13:00 IST)
Updated Date: Tue, 06 Sep 2022 (16:02 IST)
ಹಾಸನ : ಪತಿಯೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಂದ್ರಮ್ಮ (48) ಕೊಲೆಯಾದ ಮಹಿಳೆಯಾಗಿದ್ದು, ಚಂದ್ರಯ್ಯ ಪತ್ನಿಯನ್ನೇ ಕೊಲೆ ಮಾಡಿ ಎಸ್ಕೇಪ್ ಆಗಿರುವ ಆರೋಪಿ. ಇಂದು ಬೆಳಗ್ಗೆ ಇಂದ್ರಮ್ಮ ನಾಲ್ವರ ಜೊತೆ ಕೇಶವಮೂರ್ತಿ ಅವರ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದರು.
ಈ ವೇಳೆ ಮಾರಕಾಸ್ತ್ರ ಹಿಡಿದು ಏಕಾಏಕಿ ದಾಳಿ ಮಾಡಿದ ಚಂದ್ರಯ್ಯ ತನ್ನ ಪತ್ನಿಯನ್ನು ಮನಸ್ಸೋ ಇಚ್ಚೆ ಕೊಚ್ಚಿ ಕೊಲೆ ಮಾಡಿದ್ದಾನೆ.
ಈ ವೇಳೆ ಇಂದ್ರಮ್ಮನ ಜೊತೆಗಿದ್ದ ಮಹಿಳೆಯೊಬ್ಬರು ಕಾಪಾಡಲು ಮುಂದಾದಾಗ ಆ ಮಹಿಳೆಯ ಮೇಲು ಚಂದ್ರಯ್ಯ ಹಲ್ಲೆ ಮಾಡಿದ್ದಾನೆ. ಚಂದ್ರಯ್ಯ-ಇಂದ್ರಮ್ಮನ ನಡುವೆ ಆಗಾಗ ಜಗಳ ನಡೆಯುತ್ತಿದ್ದು, ಆರು ತಿಂಗಳ ಹಿಂದೆಯು ಇಂದ್ರಮ್ಮನನ್ನು ನೇಣು ಹಾಕಿ ಕೊಲ್ಲಲು ಚಂದ್ರಯ್ಯ ಯತ್ನಿಸಿದ್ದ ಎನ್ನಲಾಗಿದೆ.
ಇದೀಗ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಈ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.