ರಸ್ತೆಯಲ್ಲೆಲ್ಲಾ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆಗೈದ ಪತಿ!?

Webdunia
ಸೋಮವಾರ, 26 ಜೂನ್ 2023 (10:12 IST)
ಹಾಸನ : ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತೇ ಇದೆ. ಆದರೆ ಇಲ್ಲೊಂದು ದಂಪತಿಯ ಕಲಹ ಬೀದಿಗೆ ಬಂದಿದೆ. ಈ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ.
 
ಹೌದು. ಪತಿ ಶ್ರೀನಿವಾಸ್ ತನ್ನ ಪತ್ನಿ ಸವಿತಾಳನ್ನು ಸಾರ್ವಜನಿಕರ ಮುಂದೆಯೇ ರಸ್ತೆ ತುಂಬಾ ಅಟ್ಟಾಡಿಸಿ ಮನಬಂದಂತೆ ರಾಡ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಪತ್ನಿ ಮೇಲೆ ಪತಿ ಅಮಾನುಷವಾಗಿ ಹಲ್ಲೆ ಮಾಡುವ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. 

ಹಲ್ಲೆಗೈದಿದ್ದು ಯಾಕೆ..?
18 ವರ್ಷಗಳ ಹಿಂದೆ ವಿವಾಹವಾಗಿದ್ದ ಶ್ರೀನಿವಾಸ್ ಹಾಗೂ ಸವಿತಾ ಕಳೆದ ಎರಡು ವರ್ಷಗಳಿಂದ ಒಂದೇ ಮನೆಯಲ್ಲಿ ವಿಭಾಗ ಮಾಡಿಕೊಂಡು ವಾಸ ಮಾಡುತ್ತಿದ್ದರು. ಪತಿಯಿಂದ ವಿಚ್ಛೇದನಕ್ಕಾಗಿ ಕಾನೂನು ಹೋರಾಟ ನಡೆಸುತ್ತಿರುವ ಸವಿತಾ ಆಸ್ತಿ ವಿಭಾಗಕ್ಕೂ ಪತಿ ಮೇಲೆ ಕೇಸ್ ಹಾಕಿದ್ದಳು. 

 
ಶನಿವಾರ ಸಂಜೆ ಸೈಟ್ ಸೇಲ್ ಸಂಬಂಧ ಸವಿತಾ ಜೊತೆ ಶ್ರೀನಿವಾಸ್ ಜಗಳ ಮಾಡಿದ್ದಾನೆ. ಈ ವೇಳೆ ಎದುರು ಮಾತನಾಡಿದ ಪತ್ನಿ ಮೇಲೆ ಮಚ್ಚು ಹಾಗೂ ರಾಡ್ನಿಂದ ಹಲ್ಲೆ ಮಾಡಿದ್ದಾನೆ. ಪತಿಯ ಹಲ್ಲೆಯಿಂದ ತಪ್ಪಿಸಿಕೊಂಡು ಓಡಿದರೂ ಬಿಡದೆ ಮಚ್ಚಿನಿಂದ ಅಮಾನುಷವಾಗಿ ಹಲ್ಲೆಗೈದಿದ್ದಾನೆ. ಅಲ್ಲದೆ ಪತ್ನಿ ಸವಿತಾ ತಂಗಿ ಅನಿತಾ ಕಾರಿನ ಮೇಲೂ ದಾಳಿ ಮಾಡಿ ಗ್ಲಾಸ್ ಅನ್ನ ಪುಡಿ ಪುಡಿ ಮಾಡಿದ್ದಾನೆ.

ಸದ್ಯ ಗಾಯಾಳು ಸವಿತಾಗೆ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಇತ್ತ ಆರೋಪಿಗೆ ಮಚ್ಚು ನೀಡಿದ ಶ್ರೀನಿವಾಸ್ ಸಂಬಂಧಿಯನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿ ಶ್ರೀನಿವಾಸ್ ಬಂಧನಕ್ಕೆ ಎಸ್ಪಿ ಹರಿರಾಂ ಶಂಕರ್ ಎರಡು ತಂಡ ರಚಿಸಿದ್ದಾರೆ. ಘಟನೆ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments