Publish Date: Thu, 25 Jun 2020 (17:20 IST)
Updated Date: Thu, 25 Jun 2020 (17:21 IST)
ಪತಿಯೊಬ್ಬ ತನ್ನ ಪತ್ನಿಗೆ ಗುಂಡಿಕ್ಕಿ ಕೊಂದು ಆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪತಿಯ ಸಹೋದರನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಲವ್ ಮಾಡಿ ಮದುವೆಯಾಗಿದ್ದರು ಪಿಂಕಿ ಹಾಗೂ ಶೈಲೇಂದ್ರ. ಆದರೆ ಶೈಲೇಂದ್ರನ ಮನೆಯಲ್ಲಿ ನಿತ್ಯವೂ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಕೌಟುಂಬಿಕ ಕಾರಣಗಳಿಂದ ಮನನೊಂದ ಶೈಲೇಂದ್ರ ತನ್ನ ಪತ್ನಿ ಪಿಂಕಿಗೆ ಗುಂಡಿಕ್ಕಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ನಡೆದ ಬಳಿಕ ಶೈಲೇಂದ್ರನ ಸಹೋದರ ವಿಶಾಲ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉತ್ತರ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.