Webdunia - Bharat's app for daily news and videos

Install App

ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಕಾಡಿನಲ್ಲಿ ದೇಹ ಎಸೆದ ಪತಿ!?

Webdunia
ಶುಕ್ರವಾರ, 11 ಆಗಸ್ಟ್ 2023 (10:07 IST)
ವ್ಯಕ್ತಿಯೊಬ್ಬ ತನ್ನ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆತ ಆ ಮಹಿಳೆಯನ್ನು 70 ಸಾವಿರಕೊಟ್ಟು ಖರೀದಿಸಿದ್ದ, ಆಕೆಯ ನಡವಳಿಕೆ ಆತನಿಗೆ ಇಷ್ಟವಾಗದೆ ಆಕೆಯನ್ನು ಹತ್ಯೆ ಮಾಡಿ ಶವವನ್ನು ನೈಋತ್ಯ ದೆಹಲಿಯ ಫತೇಪುರ್ ಬೆರಿಯ ಅರಣ್ಯ ಪ್ರದೇಶದಲ್ಲಿ ಎಸೆದಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.
 
ಆರೋಪಿ ಪತಿ ಧರಂವೀರ್ ಮತ್ತು ಕೊಲೆಗೆ ಸಹಾಯ ಮಾಡಿದ ಅರುಮ್ ಮತ್ತು ಸತ್ಯವಾನ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತೇಪುರ್ ಬೇರಿಯ ಝೀಲ್ ಖುರ್ದ್ ಗಡಿಯ ಬಳಿಯ ಕಾಡಿನಲ್ಲಿ ಮಹಿಳೆಯ ಶವ ಪತ್ತೆಯಾದ ಬಳಿಕ ಸ್ಥಳೀಯರು ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ವಶಪಡಿಸಿಕೊಂಡರು ಎಂದು ಪೊಲೀಸ್ ಉಪ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ತಿಳಿಸಿದ್ದಾರೆ.

ಅಲ್ಲಿ ಸುತ್ತಮುತ್ತಲಿರುವ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಮಧ್ಯರಾತ್ರಿ 1.30ರ ಸುಮಾರಿಗೆ ಆಟೋರಿಕ್ಷಾ ಒಂದು ಓಡಾಡಿರುವುದು ಕಾಣಿಸಿದೆ, ಇಷ್ಟೊತ್ತಿಗೆ ಆ ಆಟೋ ಯಾಕೆ ಅಲ್ಲಿಗೆ ಬಂದಿತ್ತು ಎಂಬುದರ ಜಾಡು ಹಿಡಿದು ಪೊಲೀಸರು ತನಿಖೆ ನಡೆಸಿದ್ದಾರೆ.

ಆಟೋ ನಂಬರ್ ಅನ್ನು ಕಂಡುಹಿಡಿದ ಪೊಲೀಸರು ಅದನ್ನು ಟ್ರ್ಯಾಕ್ ಮಾಡಿದ್ದಾರೆ. ಚಾಲಕ ಛತ್ತರ್ಪುರ ನಿವಾಸಿ ಅರುಣ್ನನ್ನು ಗಡಾಯಿಪುರ ಬ್ಯಾಂಡ್ ರಸ್ತೆ ಬಳಿ ಬಂಧಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಮೃತರನ್ನು ಧರ್ಮವೀರ್ ಅವರ ಪತ್ನಿ ಸ್ವೀಟಿ ಎಂದು ಅರುಣ್ ಹೇಳಿದ್ದಾರೆ. ತಾನು ಮತ್ತು ಅವನ ಸೋದರ ಮಾವಂದಿರಾದ ನಂಗ್ಲೋಯಿ ನಿವಾಸಿಗಳಾದ ಧರಂವೀರ್ ಮತ್ತು ಸತ್ಯವಾನ್ ಅವರು ಹರ್ಯಾಣ ಗಡಿಯಲ್ಲಿ ಸ್ವೀಟಿಯನ್ನು ಕತ್ತು ಹಿಸುಕಿ ಕೊಂದು ಶವವನ್ನು ಕಾಡಿನಲ್ಲಿ ಎಸೆದಿರುವುದಾಗಿ  ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments