Select Your Language

Notifications

webdunia
webdunia
webdunia
webdunia

ಗಾಂಧಿ ಜಯಂತಿ ದಿನವೇ ಉದ್ಘಾಟನೆ ಎಂದ ಸಚಿವ

ಗಾಂಧಿ ಜಯಂತಿ ದಿನವೇ ಉದ್ಘಾಟನೆ ಎಂದ ಸಚಿವ
ಕಲಬುರಗಿ , ಭಾನುವಾರ, 14 ಜೂನ್ 2020 (16:27 IST)
ಗಾಂಧಿ ಜಯಂತಿಯಂದು ಉದ್ಘಾಟನೆ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹೇಳಿದ್ದಾರೆ.

ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಿರುವ ಟ್ರಾಮಾ ಸೆಂಟರ್ ಅನ್ನು ಮುಂದಿನ ಅಕ್ಟೋಬರ್ ನಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಜಿಮ್ಸ್ ಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ವೈಖರಿ ಪರಿಶೀಲಿಸಿ ಮಾತನಾಡಿದರು.

ಅಗತ್ಯವಾದ ಎಲ್ಲಾ ಕಾಮಗಾರಿ ಪೂರ್ಣಗೊಳಿಸಿ ಉಪಕರಣಗಳನ್ನು ತರಿಸುವ ಪ್ರಕ್ರಿಯೆ ಪೂರ್ಣ ಗೊಳಿಸಬೇಕು. ಅಗತ್ಯವಿರುವ ಸಿಬ್ಬಂದಿ ವಿವರಗಳನ್ನು ನಿರ್ದೇಶಕರಿಗೆ ಕಳುಹಿಸಿ ಒಪ್ಪಿಗೆ ಪಡೆದು ತ್ವರಿತವಾಗಿ ಟ್ರಾಮಾ ಸೆಂಟರ್ ಕಾರ್ಯಾರಂಭಿಸುವಂತೆ ನೋಡಿಕೊಳ್ಳಬೇಕು. ಬರುವ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ಅದನ್ನು ಉದ್ಘಾಟಿಸಲು ಸಿದ್ಧತೆ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚಿಸಿದರು.

ಖಾಲಿಯಿರುವ 16 ಪ್ರೊಫೆಸರ್ ಹುದ್ದೆಗಳ ಭರ್ತಿಗೆ ತಕ್ಷಣವೇ ಅಧಿಸೂಚನೆ ಹೊರಡಿಸಿ ನೇಮಕ ಪ್ರಕ್ರಿಯೆ ಮುಗಿಸುವಂತೆ ಸೂಚಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

SSLC ವಿದ್ಯಾರ್ಥಿಗಳಿಗಾಗಿ ಫೇಸ್ ಬುಕ್ ಲೈವ್ ಗೆ ಬಂದ ಮಾಜಿ ಶಾಸಕ