Webdunia - Bharat's app for daily news and videos

Install App

ಮಳೆಯಾಗುವ ಎಚ್ಚರಿಕೆ ನೀಡಿದ ಭಾರತೀಯ ಹವಾಮಾನ ಇಲಾಖೆ

Webdunia
ಬುಧವಾರ, 19 ಜುಲೈ 2023 (16:50 IST)
ಕರಾವಳಿ ಭಾಗಕ್ಕೆ ಇನ್ನೂ ಮೂರು ದಿನಗಳ‌ ಕಾಲ ಮಳೆ‌ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ.ದಕ್ಷಿಣ ಮಹಾರಾಷ್ಟ್ರದಿಂದ ಕೇರಳ ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಲಿದೆ.ಹೀಗಾಗಿ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
 
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ಮುಂದುವರೆದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.ಕೆಲವು ಕಡೆ ಭಾರಿ ಮಳೆ ಕಾರಣ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ ಸಾಧ್ಯತೆ ಇದೆ.ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು,ಅಲ್ಲಲ್ಲಿ ಭಾರಿ ಮಳೆ‌ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದು,ಬೆಂಗಳೂರಿನಲ್ಲೂ ಇಂದು ಸಂಜೆ ಬಳಿಕ ಮಳೆ ಸಾಧ್ಯತೆ ಇದೆ.ಬಿರುಗಾಳಿ ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments