Webdunia - Bharat's app for daily news and videos

Install App

ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ!

Webdunia
ಸೋಮವಾರ, 25 ಜೂನ್ 2018 (16:19 IST)
ತುಮಕೂರು: ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ ತುಮಕೂರು ಜಿಲ್ಲೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.

ನಿವೇಶನ ಹಂಚಿಕೆ ವಿಷಯವಾಗಿ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ಜಿಲ್ಲೆಯ ಪಾವಗಡ ತಾಲೂಕಿನ ವದನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚುನಾವಣೆಗೆ ಮುನ್ನ ನಿವೇಶನ ಹಂಚಿಕೆ ಪಟ್ಟಿಯನ್ನು ಜೆಡಿಎಸ್ ಕಾರ್ಯಕರ್ತರು ನೀಡಿದ್ದರು ಎನ್ನಲಾಗಿದೆ.

ಆದರೆ ಆ ಪಟ್ಟಿಯ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಅಸಮಧಾನ ಹೊರಹಾಕಿದ್ದಾರೆ. ನಿವೇಶನ ಹಂಚಿಕೆ ಕುರಿತ ಪಟ್ಟಿ ಸರಿಯಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಇಓಗೆ ಮನವಿ ಸಲ್ಲಿಸಿದ್ದರು. ಹೀಗಾಗಿ ಇಓ ಕೂಡ ಸ್ಥಳ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಯ ಎದುರಲ್ಲೇ ದೊಣ್ಣೆ ಹಿಡಿದುಕೊಂಡು ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments