Publish Date: Fri, 27 Oct 2017 (14:33 IST)
Updated Date: Fri, 27 Oct 2017 (14:38 IST)
ಬೆಂಗಳೂರು: ಕರಾವಳಿ ಜಾನಪದ ಕ್ರೀಡೆ ಕಂಬಳ ನಿಷೇಧ ತೆರವು ಕುರಿತ ಆದೇಶಕ್ಕೆ ರಾಷ್ಟ್ರಪತಿ ಅಂಕಿತ ದೊರೆತಿದೆ. ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಸಹ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಸಚಿವ ಟಿ.ಬಿ.ಜಯಚಂದ್ರ, ಭಡ್ತಿ ಮೀಸಲಾತಿ, ಕಂಬಳ ಆಚರಣೆ ಮುಂದುವರಿಕೆ, ಮೂಢನಂಬಿಕೆ ನಿಷೇಧ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ನಿಯಂತ್ರಿಸುವ ಸಂಬಂಧ ನಾಲ್ಕು ಪ್ರಮುಖ ಕಾನೂನು ತಿದ್ದುಪಡಿ ಮಸೂದೆಗಳನ್ನು ನ. 13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮಂಸಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಂಬಳ ಆಚರಣೆಗೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧ್ಯಾದೇಶಕ್ಕೆ ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ. ಇದಕ್ಕೆ ಪೂರಕ ಕಾನೂನು ತಿದ್ದುಪಡಿಗೆ ಮಸೂದೆ ಮಂಡನೆ ಮಾಡಲಾಗುತ್ತಿದೆ. ನವೆಂಬರ್ ನಿಂದ ಕಂಬಳ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಪಶುಸಂಗೋಪನಾ ಇಲಾಖೆ ಮೂಲಕ ಅಧಿಸೂಚನೆ ಹೊರಡಿಸಲು ಸೂಚನೆ ನೀಡಲಾಗಿದೆ ಎಂದರು.