Select Your Language

Notifications

webdunia
webdunia
webdunia
webdunia

ಮಹಾಲಕ್ಷ್ಮಿಯ ಹಂತಕ ಯಾರೆಂದು ಕೊನೆಗೂ ರಿವೀಲ್

Bengaluru Fridge Case

Sampriya

ಬೆಂಗಳೂರು , ಬುಧವಾರ, 25 ಸೆಪ್ಟಂಬರ್ 2024 (20:01 IST)
Photo Courtesy X
ಬೆಂಗಳೂರು: ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮಹಾಲಕ್ಷ್ಮೀ ಹತ್ಯೆ ಪ್ರಕರಣದ ಆರೋಪಿಯ ಫೋಟೋ ರಿವೀಲ್ ಆಗಿದೆ. ಈಗಾಗಲೇ ಆರೋಪಿಯ ಪತ್ತೆಗಾಗಿ ಪೊಲೀಸರು ಒಡಿಶಾದ ಕಡೆ ಪ್ರಯಾಣ ಬೆಳೆಸಿದ್ದಾರೆ.

ಹಲವು ಆಯಾಮದಲ್ಲಿ ತನಿಖೆ ನಡೆಸಿದ ಪೊಲೀಸರು ಈಗಾಗಲೇ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಮುಖ ಆರೋಪಿ ಒಡಿಶಾದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಸಿಕ್ಕಿದೆ. ಇದರ ಬೆನ್ನಲ್ಲೇ ಮಹಾಲಕ್ಷ್ಮೀ ಸಹೋದ್ಯೋಗಿಯೇ ಹಂತಕನೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಬೆಂಗಳೂರಿನ ವೈಯ್ಯಾಲಿ ಕಾವಲ್ ಮನೆಯಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು, 50ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಜ್‌ನಲ್ಲಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ.

ಪ್ರಕರಣದ ಬಗ್ಗೆ ಗೃಹಸಚಿವ ಜಿ ಪರಮೇಶ್ವರ್ ಬಗ್ಗೆ ಪ್ರತಿಕ್ರಿಯಿಸಿದ ಬೆನ್ನಲ್ಲೇ ಹಂತಕನ ಫೋಟೋ ರಿವೀಲ್ ಆಗಿದೆ. ಆದರೆ ತನಿಖೆಯಾದ ಮೇಲೆಯಷ್ಟೇ ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ ವಿರುದ್ಧ ರೋಷಾವೇಶ ತೋರಿದ್ದ ಸಿದ್ದರಾಮಯ್ಯ ಈಗ್ಯಾಕೆ ಮೊಂಡುತನ ತೋರಿಸುವುದು