Select Your Language

Notifications

webdunia
webdunia
webdunia
webdunia

ಅತ್ಯಾಚಾರಿಗಳಿಗೆ ಪುರುಷತ್ವ ಹರಣದ ಕಾನೂನು ಜಾರಿಗೊಳಿಸಬೇಕು– ಶೋಭಾ

ಅತ್ಯಾಚಾರಿಗಳಿಗೆ ಪುರುಷತ್ವ ಹರಣದ ಕಾನೂನು ಜಾರಿಗೊಳಿಸಬೇಕು– ಶೋಭಾ
ವಿಜಯಪುರ , ಭಾನುವಾರ, 24 ಡಿಸೆಂಬರ್ 2017 (20:40 IST)
ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ವಿಜಯಪುರದಲ್ಲಿ ಕೊಲೆಯಾಗಿರುವ ದಲಿತ ಬಾಲಕಿಯ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿ, ವೈಯಕ್ತಿಕವಾಗಿ 25ಸಾವಿರ ರೂಪಾಯಿ ನೀಡಿದ ನಂತರ ಮಾತನಾಡಿದ ಅವರು, ಈ ಘಟನೆಯಿಂದ ಸಮಾಜ ತಲೆತಗ್ಗಿಸುವಂತಾಗಿದ್ದು, ಹಾಡುಹಗಲೇ ಅಪಹರಣ ಮಾಡಿ ಅತ್ಯಾಚಾರ ನಡೆಸಿ ಕೊಲೆಗೈಯುತ್ತಾರೆ ಎಂದು ಕಾನೂನು ಪರಿಸ್ಥಿತಿ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.
 
ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಇಂತಹ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು. ಇಂತಹ ಶಿಕ್ಷೆಯನ್ನು ಜಾರಿಗೆ ತಂದರೆ ಅತ್ಯಾಚಾರಿಗಳಲ್ಲಿ ಭಯ ಹುಟ್ಟಿಸಿದಂತಾಗುತ್ತದೆ. 2013 ಕ್ರಿಮಿನಲ್ ತಿದ್ದುಪಡಿ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಲು ಅಧಿವೇಶನದಲ್ಲಿ ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಉಪಚುನಾವಣೆ: ದಿನಕರನ್‌ಗೆ ಭರ್ಜರಿ ಗೆಲುವು, ಮಕಾಡೆ ಮಲಗಿದ ಎಐಎಡಿಎಂಕೆ, ಡಿಎಂಕೆ