ಹಲವರ ಕೊರಳಲ್ಲಿ ನೇತಾಡುತ್ತಿರುವ ಹುಲಿ ಉಗುರಿನ ಲಾಕೆಟ್ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು. ಇವರ ವಿರುದ್ಧ ಕ್ರಮ ಏನು ಎಂದು ಪ್ರಶ್ನಿಸಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದು, ನಟ ದರ್ಶನ್, ಜಗ್ಗೇಶ್ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ. ಆದರೆ ಯಾರೇ ದೂರು ನೀಡಿದರೂ ಇಲಾಖೆ ಕ್ರಮ ಕೈಗೊಳ್ಳಲಿದೆ ಪ್ರಭಾವಿಗಳನ್ನು ಬಿಡುವ ಪ್ರಶ್ನೆಯೇ ಇಲ್ಲ. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎಂದು ಖಡಕ್ ಆಗಿಯೇ ಉತ್ತರಿಸಿದ್ದಾರೆ.