Daily Horoscope

Select Your Language

Notifications

webdunia
webdunia
webdunia
webdunia

ಅಂಥ ಕೆಲಸ ಮಾಡೋರಿಗೆ ಸಚಿವ ಸ್ಥಾನ ಕೊಡಲಿ ಎಂದ ಶಾಸಕ

ಬಿ.ಎಸ್.ಯಡಿಯೂರಪ್ಪ
ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಜೀವಂತವಾಗಿವೆ. ಹೀಗಾಗಿ ಅಭಿವೃದ್ಧಿ ಕೆಲಸ ಮಾಡೋರಿಗೆ ಸಚಿವ ಸ್ಥಾನ ನೀಡಬೇಕು.

ಹೀಗಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ ನೀಡಿದ್ದಾರೆ.

ಈ ಹಿಂದೆ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ಈಗಲ್ಲ. ನಾನು ಪಕ್ಷಕ್ಕಾಗಿ ತ್ಯಾಗ ಮಾಡಿರುವೆ. ಇನ್ನೊಂದಿಷ್ಟು ಸಚಿವರು ತಮ್ಮ ಸ್ಥಾನಗಳನ್ನು ತ್ಯಾಗ ಮಾಡಲಿ ಅಂತ ಯತ್ನಾಳ್ ಹೇಳಿದ್ದಾರೆ.

ಈ ವಾರದಲ್ಲಿ ಸಂಪುಟ ವಿಸ್ತರಣೆ ಆಗಬೇಕು. ನಿತ್ಯ ಸಚಿವ ಸಂಪುಟ ವಿಸ್ತರಣೆಯದ್ದೇ ಸುದ್ದಿಯಾಗ್ತಿದೆ. ಇನ್ನು ಗೂಟದ ಕಾರಿನ ಕನಸು ಕಂಡೋರಿಗೆ ಹಾಗೂ ವಿಧಾನಸೌಧದಲ್ಲೇ ಠಿಕಾಣಿ ಹೂಡೋರಿಗೆ ಸಚಿವ ಸ್ಥಾನ ಕೊಡಬಾರದು ಅಂತ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಆ ಕಾರಣಕ್ಕೆ ಪತಿಯನ್ನೇ ಕಿಡ್ನಾಪ್ ಮಾಡಿ ಕೊಲೆ ಮಾಡಿದ ಪತ್ನಿ