Publish Date: Sat, 22 Apr 2023 (17:50 IST)
Updated Date: Sat, 22 Apr 2023 (17:33 IST)
ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಪಿರಮೇನಹಳ್ಳಿ ಗ್ರಾಮದ ಮುಖಂಡ ಮಂಜು ಹಣ ಕೊಡುವುದಾಗಿ ನಂಬಿಸಿ ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ರೋಡ್ ಶೋಗೆ ಕರೆದೊಯ್ದು ಹಣ ಕೊಟ್ಟಿಲ್ಲ. ಇದೇ ಕಾರಣಕ್ಕೆ ಗ್ರಾಮದ ಮಹಿಳೆಯೊಬ್ಬರು ಆತನನ್ನ ಅಟ್ಟಾಡಿಸಿ ಹೊಡೆದಿರುವ ಘಟನೆ ತರೀಕೆರೆ ತಾಲೂಕಿನ ಪಿರಮೇನಹಳ್ಳಿಯಲ್ಲಿ ನಡೆದಿದೆ.. ನಿನ್ನೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ರೋಡ್ ಶೋ ಮಾಡಿದ್ದು, ಗ್ರಾಮದ ಜನರಿಗೆ ಹಣ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿ ಬಳಿಕ ಹಣ ನೀಡಿಲ್ಲ. ಇದಕ್ಕೆ ಕೋಪಗೊಂಡ ಗ್ರಾಮಸ್ಥರು ಮುಖಂಡ ಮಂಜು ಮೇಲೆ ಹಲ್ಲೆ ನಡೆಸಿದ್ದಾರೆ.