ಶಾಸಕ ಗಣೇಶ್ ಗೋವಾದಲ್ಲಿ ಅರೆಸ್ಟ್!

Webdunia
ಬುಧವಾರ, 20 ಫೆಬ್ರವರಿ 2019 (17:15 IST)
ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಹೊಸಪೇಟೆಯ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ನಡೆಸಿದ ಮಾರಣಾಂತಿಕ ಹಲ್ಲೆ  ಪ್ರಕರಣ ಕೈ ನಾಯಕರಿಗೆ ಬಾರಿ ತಲೆಬಿಸಿಯಾಗಿತ್ತು. ಕೊನೆಗೂ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ಅವರನ್ನು ಬಿಡದಿ ಪೊಲೀಸರು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೊರ ರಾಜ್ಯದಲ್ಲಿ ಜೆ.ಎನ್.ಗಣೇಶ್ ಅವರನ್ನು ಬಂಧಿಸಲಾಗಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದ್ದು, ಇಂದು ಮಧ್ಯರಾತ್ರಿ ಗಣೇಶ್ ಅವರನ್ನು ರಾಮನಗರಕ್ಕೆ ಕರೆತರುವ ಸಾಧ್ಯತೆ ಇದೆ. ಗಣೇಶ್ ಅವರನ್ನು ಗೋವಾದಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ.

ಜನವರಿ 20 ರಾತ್ರಿ ಜೆ.ಎನ್.ಗಣೇಶ್ ಅವರು ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರ ಮೇಲೆ ಈಗಲ್ಟನ್ ರೆಸಾರ್ಟ್ನಲ್ಲಿ ಹಲ್ಲೆ ಮಾಡಿದ್ದರುಆನಂದ್ ಸಿಂಗ್ ಅವರ ಕಣ್ಣು, ತಲೆಗೆ ಗಂಭೀರ ಗಾಯಗಳಾಗಿತ್ತು. ಅಂದಿನಿಂದ ಕಂಪ್ಲಿ ಗಣೇಶ್ ತಲೆಮರೆಸಿಕೊಂಡಿದ್ದರು. ಜನವರಿ 21ರಂದು ಗಣೇಶ್ ಮೇಲೆ ಎಫ್ಐಆರ್ ದಾಖಲಾಗಿತ್ತು. ಅಂದಿನಿಂದಲೂ ಗಣೇಶ್ ತಲೆಮರೆಸಿಕೊಂಡಿದ್ದರು.

ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಗಣೇಶ್ ಅವರು ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರುಆದರೆ ನಿನ್ನೆ ಅದನ್ನು ವಾಪಸ್ ಪಡೆಯಲಾಗಿತ್ತು. ಅದರ ಬೆನ್ನಿಗೆ ಇಂದು ಗಣೇಶ್ ಬಂಧನವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವನೆಂಥಾ ಕ್ರೂರಿ, ಪತ್ನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ, ಕಾರಣ ಇಲ್ಲಿದೆ

ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಿಗದ ಅವಕಾಶ: ಕಾಂಗ್ರೆಸ್ ಆಕ್ರೋಶ

ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್‌ ಮುಖಂಡ ರಾಜೀವ್ ಪತ್ತೆಗೆ ಪೊಲೀಸರು ಹರಸಾಹಸ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments