ಸಂಪುಟ ವಿಸ್ತರಣೆಗೆ ನಿಗದಿಯಾಗದ ಮುಹೂರ್ತ: ಶಾಸಕರು ಅಸಮಧಾನ

Webdunia
ಗುರುವಾರ, 29 ನವೆಂಬರ್ 2018 (18:08 IST)
ಸಚಿವ  ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ ಆಗುತ್ತಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಲ್ಲಿ ತೀವ್ರ ನಿರಾಸೆಗೆ ಕಾರಣವಾಗಿದೆ.

ನವೆಂಬರ್ ತಿಂಗಳಾಂತ್ಯದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಭರವಸೆಯಲ್ಲಿದ್ದ ಶಾಸಕರುಗಳಿಗೆ ಮತ್ತೆ ನಿರಾಸೆ ಎದುರಾಗುವ ಸಾಧ್ಯತೆ ನಿಚ್ಚಳವಾಗಿದೆ.

ನಡುವೆ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲು ದೆಹಲಿಯಲ್ಲಿ ಬೀಡು ಬಿಟ್ಟಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕರ ಒತ್ತಡವನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದು ವಿಧಾನ ಮಂಡಲದ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯಲು ಮುಂದಾಗಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಭರವಸೆ ನೀಡಿದರು. ಹೀಗಾಗಿ ಸಚಿವಾಕಾಂಕ್ಷಿ ಶಾಸಕರು ಬಾರಿಯಾದರೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಜಾತಕ ಪಕ್ಷಿಯಂತೆ ಕಾಯುತ್ತಿದ್ದರು.

ಆಸೆ ಕೈ ಗೂಡುವ ಲಕ್ಷಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಮೇಲೆ ಒತ್ತಡ ಹಾಕಿದ್ದಾರೆ.
ಮತ್ತೊಂದೆಡೆ ಪಂಚ ರಾಜ್ಯಗಳ ಚುನಾವಣಾ ಬ್ಯುಸಿಯಲ್ಲಿರುವ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ದಿನೇಶ್ ಗುಂಡೂರಾವ್ ಅವರಿಗೆ ಭೇಟಿ ಸಾಧ್ಯವಾಗಿಲ್ಲ.

ಹೀಗಾಗಿ ಶಾಸಕರ ಬೇಡಿಕೆಯನ್ನು ಗಮನದಲ್ಲಿರಿಸಿಕೊಂಡು ಶೀಘ್ರವೇ ಸಂಪುಟ ವಿಸ್ತರಿಸಿ ಇಲ್ಲದಿದ್ದರೇ ಪರಿಣಾಮ ಎದುರಿಸಬೇಕಾಗಿತ್ತು ಎನ್ನುವ ಅಂಶವನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಡಲು ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ.

ಸಚಿವ ಸಂಪುಟದಲ್ಲಿ ಅವಕಾಶ ಸಿಗದಿದ್ದರೇ ತಮ್ಮ ದಾರಿ ನೋಡಿಕೊಳ್ಳಬೇಕಾಗುತ್ತದೆ ಎಂದು ಹಲವು ಶಾಸಕರು, ಪಕ್ಷದ ನಾಯಕರ ಮೇಲೆ ಒತ್ತಡ ಹೇರಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯ ಒತ್ತಡಕ್ಕೆ ರಾಜ್ಯ ನಾಯಕರು ಸಿಲುಕಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments