Select Your Language

Notifications

webdunia
webdunia
webdunia
Tuesday, 1 April 2025
webdunia

ಯುವಕನನ್ನು ಕೊಂದ ಚಿರತೆಗಳು ಪ್ರತ್ಯಕ್ಷ..!

The leopards that killed the young man were witnessed
ಮೈಸೂರು , ಬುಧವಾರ, 2 ನವೆಂಬರ್ 2022 (16:21 IST)
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದಲ್ಲಿರುವ ಶ್ರೀ ಮಲ್ಲಿಕಾರ್ಜುನಸ್ವಾಮಿ ಬೆಟ್ಟದ ಬಳಿ ಚಿರತೆ ದಾಳಿಗೆ ನಿನ್ನೆ ಯುವಕನೋರ್ವ ಬಲಿಯಾಗಿದ್ದ. ಶ್ರೀ ಮಲ್ಲಿಕಾರ್ಜುನಸ್ವಾಮಿ ಬೆಟ್ಟದಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿವೆ. ಬಂಡೆಕಲ್ಲುಗಳ ಮೇಲೆ ಚಿರತೆ ಕುಳಿತಿರುವ ದೃಶ್ಯ ಗ್ರಾಮಸ್ಥರ ಮೊಬೈಲ್​​ನಲ್ಲಿ ಸೆರೆಯಾಗಿದೆ. M.L ಹುಂಡಿ ಗ್ರಾಮದ ಯುವಕನ ಮೇಲೆ ಚಿರತೆಗಳು ದಾಳಿ ಮಾಡಿದ್ವು. ಅದೇ ಜಾಗದಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ‌ ಆತಂಕ ಹೆಚ್ಚಾಗಿದೆ. ಚಿರತೆಗಳ ಭೀತಿಯಿಂದ ಜಾನುವಾರುಗಳನ್ನು ಮೇಯಿಸಲು ಹೋಗಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದಾರೆ. ಚಿರತೆಗಳನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

LLC ಕಾಲುವೆ ಬಳಿ ಶ್ರೀರಾಮುಲು ವಾಸ್ತವ್ಯ