Webdunia - Bharat's app for daily news and videos

Install App

ಗಡಿಜಿಲ್ಲೆಯ ಮತದಾರರ ಪಟ್ಟಿ ಪ್ರಕಟ

Webdunia
ಗುರುವಾರ, 17 ಜನವರಿ 2019 (17:09 IST)
ರಾಜ್ಯದ ಗಡಿ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ 1.1.2019ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಚಾಮರಾಜನಗರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಭಾವಚಿತ್ರವಿರುವ ಅಂತಿಮ ಮತದಾರರ ಪಟ್ಟಿಯನ್ನು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳು, ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ 413356 ಪುರುಷರು, 416278 ಮಹಿಳೆಯರು, ಇತರರು 62 ಮಂದಿ ಸೇರಿದಂತೆ ಒಟ್ಟು 829696 ಮಂದಿ ಅಂತಿಮ ಮತದಾರರ ಪಟ್ಟಿಯಲ್ಲಿ ಇದ್ದಾರೆ. 

ಹನೂರು ವಿಧಾನಸಭಾ ಕ್ಷೇತ್ರದಲ್ಲಿ 105569 ಪುರುಷರು, 102123 ಮಹಿಳೆಯರು, ಇತರರು 14 ಮಂದಿ ಸೇರಿದಂತೆ ಒಟ್ಟು 207706 ಮತದಾರರು ಅಂತಿಮ ಮತದಾರರ ಪಟ್ಟಿಯಲ್ಲಿದ್ದಾರೆ. 

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 104568 ಪುರುಷರು, 106001 ಮಹಿಳೆಯರು, ಇತರರು 18 ಮಂದಿ ಸೇರಿದಂತೆ ಒಟ್ಟು 210587 ಮತದಾರರು ಅಂತಿಮ ಮತದಾರರ ಪಟ್ಟಿಯಲ್ಲಿದ್ದಾರೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 101125 ಪುರುಷರು, 104069 ಮಹಿಳೆಯರು, ಇತರರು 16 ಮಂದಿ ಸೇರಿದಂತೆ ಒಟ್ಟು 205210 ಮತದಾರರು ಅಂತಿಮ ಮತದಾರರ ಪಟ್ಟಿಯಲ್ಲಿದ್ದಾರೆ. 

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 102094 ಪುರುಷರು, 104085 ಮಹಿಳೆಯರು, ಇತರರು 14 ಮಂದಿ ಸೇರಿದಂತೆ ಒಟ್ಟು 206193 ಮತದಾರರು ಅಂತಿಮ ಮತದಾರರ ಪಟ್ಟಿಯಲ್ಲಿದ್ದಾರೆ.  

ಚುನಾವಣಾ ಆಯೋಗದ ನಿರ್ದೇಶನದಂತೆ,  16.01.2019ರಂದು ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯ ಒಂದು ಪ್ರತಿಯನ್ನು ನೋಂದಾಯಿತ ಮಾನ್ಯತೆ ಪಡೆದ ರಾಷ್ಟ್ರೀಯ, ರಾಜ್ಯ ರಾಜಕೀಯ ಪಕ್ಷಗಳಿಗೆ ಉಚಿತವಾಗಿ ನೀಡಲಾಗುತ್ತದೆ. 

ಸೇರ್ಪಡೆಯಾದ ಎಲ್ಲಾ ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿ ವಿತರಿಸಲಾಗುತ್ತದೆ. 
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಅಥವಾ ಜಿಲ್ಲೆಯ ಹೊರಗಿನ ಯಾವುದೇ ಪ್ರದೇಶದಿಂದ ಚುನಾವಣಾ ವಿಷಯಗಳ ಕುರಿತು ನಾಗರಿಕರಿಂದ ಮನವಿ, ದೂರು, ಅಹವಾಲುಗಳನ್ನು ಸ್ವೀಕರಿಸಲು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೊಠಡಿ ಸಂಖ್ಯೆ 104 (ಕಂಟ್ರೋಲ್ ರೂಂ) ರಲ್ಲಿ ಮತದಾರರ ಸಹಾಯವಾಣಿಯಾಗಿ ದೂರವಾಣಿ ಸಂಖ್ಯೆ 1950 ಅನ್ನು ಅಳವಡಿಸಲಾಗಿರುತ್ತದೆ. ಜಿಲ್ಲೆಯಿಂದ ಅಥವಾ ಯಾವುದೇ ಪ್ರದೇಶದಿಂದ ಸಾರ್ವಜನಿಕರು ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ತಮ್ಮ ಮನವಿ, ದೂರು, ಅಹವಾಲುಗಳನ್ನು  ತೆರೆಯಲಾಗಿರುವ ಟೋಲ್‍ಫ್ರೀ ದೂರವಾಣಿ ಸಂಖ್ಯೆ 1950ಕ್ಕೆ ಕರೆ ಮಾಡಿ ತಿಳಿಸಬಹುದಾಗಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments