Select Your Language

Notifications

webdunia
webdunia
webdunia
webdunia

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಹಿಗ್ಗಾ ಮಗ್ಗಾ ಥಳಿಸಿದ ಸ್ಥಳೀಯರು

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಹಿಗ್ಗಾ ಮಗ್ಗಾ ಥಳಿಸಿದ ಸ್ಥಳೀಯರು
ಬಾಗಲಕೋಟೆ , ಶುಕ್ರವಾರ, 28 ಸೆಪ್ಟಂಬರ್ 2018 (08:49 IST)
ಬಾಗಲಕೋಟೆ : ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯೊರ್ವನನ್ನು ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾ ಮಗ್ಗಾ ಥಳಿಸಿದ ಘಟನೆ ಬಾಗಲಕೊಟೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ.


ಸಿದ್ದಯ್ಯ ಗುರುಪಾದಯ್ಯ ಕಾಡದೇವರ (47) ಎಂಬಾತ ಪಟ್ಟಣದ ಕಾಡಸಿದ್ದೇಶ್ವರ ದೇವಾಲಯದ ಬಳಿ ಚಾಕಲೇಟ್ ಆಸೆ ತೋರಿಸಿ ಬಾಲಕಿಯನ್ನು ಕರೆದುಕೊಂಡು ಬಂದು ದೇವಾಲಯದ ಪಕ್ಕದಲ್ಲಿಯೇ ಇರುವ ಹಿಟ್ಟಿನ ಗಿರಿಣಿ ಬಳಿ ಅತ್ಯಾಚಾರ ಎಸಗಲು ಯತ್ನಿಸಿದ್ದಾರೆ. ಈ ವೇಳೆ ಆತನನ್ನು ಹಿಡಿದ ಸ್ಥಳೀಯರು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಸ್ಥಳೀಯರು ಅತ್ಯಾಚಾರ ಮಾಡಲು ಯತ್ನಿಸಿದ ವ್ಯಕ್ತಿ ಈ ಹಿಂದೆ ಕೂಡ ಕೆಲ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಿ ಸೂಕ್ತ ಕ್ರಮ ತೆಗೆದುಕೊಂಡು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಮೆಡಿಕಲ್ ಶಾಪ್ ಹುಡುಕಿಕೊಂಡು ಹೋಗಬೇಡಿ!