Webdunia - Bharat's app for daily news and videos

Install App

ಪೊಲೀಸರಿಗೆ ತಲೆನೋವಾದ ಆರೋಪಿಗಳ ಲೊಕೇಷನ್ ​

geetha
ಮಂಗಳವಾರ, 9 ಜನವರಿ 2024 (17:00 IST)
ಬೆಂಗಳೂರು-ಬೆಂಗಳೂರು ನಗರದ ಮ್ಯೂಸಿಯಮ್​ಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದ ಪ್ರಕರಣದ ತನಿಖೆಯಲ್ಲಿ ಪೊಲೀಸರಿಗೆ ಮಹತ್ವದ ವಿಚಾರವೊಂದು ತಿಳಿದುಬಂದಿದೆ. ದುಷ್ಕರ್ಮಿಗಳು ವಿಪಿಎನ್ ಬಳಸಿ ಇಮೇಲ್ ಮಾಡಿರುವುದು ಪೊಲೀಸರಿಗೆ ತಿಳಿದಿದೆ. ದುಷ್ಕರ್ಮಿಗಳು ಗೂಗಲ್ ಇ-ಮೇಲ್ ವೆಬ್ ಬಳಸಿಯೇ ಮೇಲ್ ಮಾಡಿದ್ದಾರೆ. ಆದರೆ ನೆಟ್​ವರ್ಕ್ ಮಾತ್ರ ವಿಪಿಎನ್ ಬಳಸಿದ್ದಾರೆ. ಹೀಗಾಗಿ ಕೇಂದ್ರ ವಿಭಾಗದ ಪೊಲೀಸರಿಂದ ತನಿಖೆ ಮುಂದುವರೆದಿದೆ.

ವಿಪಿಎನ್ ನೆಟ್​ವರ್ಕ್ ಬಳಸಿಕೊಂಡರೇ ಐಪಿ ಅಡ್ರೆಸ್ ಟ್ರೇಸ್ ಮಾಡುವುದು ಕಷ್ಟವಾಗುತ್ತದೆ. ಸಾಧಾರಣವಾಗಿ ಇಂತಹ ಪ್ರಕರಣಗಳಲ್ಲಿ ಐಪಿ ಅಡ್ರೆಸ್ ಟ್ರೇಸ್ ಮಾಡಲು ಕಷ್ಟವಾಗುತ್ತದೆ. ಬೇರೆ ಬೇರೆ ದೇಶಗಳಿಂದ ಮೇಲ್ ಬಂದಿರುವ ಹಾಗೆ ಐಪಿ ಅಡ್ರೆಸ್ ತೋರಿಸುತ್ತದೆ. ಈ ಪ್ರಕರಣದಲ್ಲಿ ಐಪಿ ಅಡ್ರೆಸ್ ಮೂರು ದೇಶದ ಲೊಕೇಷನ್​ಗಳನ್ನು ತೋರಿಸುತ್ತಿದೆ. ಇದರಿಂದ ಪೊಲೀಸರಿಗೆ ತಲೆನೋವಾಗಿದೆ. ಆದರೆ ಅದರ ಸರಿಯಾದ ಐಪಿ ಅಡ್ರೆಸ್ ಹುಡುಕಲು ಕಾಲಾವಕಾಶ ಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments