ಆಕಸ್ಮಿಕ ಬೆಂಕಿ ತಗುಲಿ ಸಿಮೆಂಟ್ ತುಂಬಿದ ಲಾರಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಲಾರಿ ಸಿಮೆಂಟ್ ತುಂಬಿಕೊಂಡು ಹುಬ್ಬಳ್ಳಿಯಿಂದ ಮಂಗಳೂರು ಕಡೆ ರಾಷ್ಟ್ರೀಯ ಹೆದ್ದಾರಿ-66 ಅರಬೈಲ್ ಘಟ್ಟದ ಮೂಲಕ ಹೊರಟಿತ್ತು. ಈ ವೇಳೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಬೆಂಕಿ ಕೆನ್ನಾಲಿಗೆ ಲಾರಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರು ಕಡೆ ಲಾರಿ ರಾಷ್ಟ್ರೀಯ ಹೆದ್ದಾರಿ 66 ಹೊರಟಿತ್ತು. ಲಾರಿ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಸಮೀಪಿಸುತ್ತಿದ್ದಂತೆ ಲಾರಿಯ ಬ್ರೆಕ್ ಲೈನರ್ ಸವೆದು ಹೀಟ್ನಿಂದ ಟೈಯರ್ಗೆ ಬೆಂಕಿ ತಗುಲಿದೆ. ನೋಡ ನೋಡುತ್ತಿದ್ದಂತೆ ಬೆಂಕಿ, ಲಾರಿ ತುಂಬ ವ್ಯಾಪಿಸಿ, ಸುಟ್ಟು ಕರಕಲಾಗಿದೆ.