Webdunia - Bharat's app for daily news and videos

Install App

ಕುಡಿದ ನಶೆಯಲ್ಲಿ ರಾತ್ರಿ ಮನೆಗಳ‌ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದು ಹುಚ್ಚಾಟ

Webdunia
ಭಾನುವಾರ, 26 ಸೆಪ್ಟಂಬರ್ 2021 (21:28 IST)
ಬೆಂಗಳೂರು: ಕುಡಿದ ನಶೆಯಲ್ಲಿ ರಾತ್ರಿ ಮನೆಗಳ‌ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದು ಹುಚ್ಚಾಟ ಮೆರೆದಿದ್ದ ಐವರು ಎಂಜಿನಿಯರಿಂಗ್​​ ವಿದ್ಯಾರ್ಥಿಗಳನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದ್ಯಾರ್ಥಿಗಳು ಬಿಹಾರ ಮತ್ತು ಉತ್ತರ ಪ್ರದೇಶ ಮೂಲದವರಾಗಿದ್ದಾರೆ. ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿರುವ ಇವರು  ಮದ್ಯದ ಮತ್ತಿನಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದಿದ್ದರು.
ಬರ್ತ್​ಡೇ ಆಚರಣೆಗೆ ತೆರಳಿದ್ದರು: ಬಂಧಿತರು ರಾಜರಾಜೇಶ್ವರಿ ನಗರದ ಕೃಷ್ಣಾ ಗಾರ್ಡನ್​​ನ ಅಪಾರ್ಟ್​ಮೆಂಟ್​ವೊಂದರಲ್ಲಿ ವಾಸವಾಗಿದ್ದ ಸ್ನೇಹಿತನ ಬರ್ತ್​ಡೇ ಹಿನ್ನೆಲೆ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ತೆರಳಿದ್ದರು. ರಾತ್ರಿ 2 ಗಂಟೆ‌ ವೇಳೆ‌ಗೆ ಪಾರ್ಟಿ ಮುಗಿಸಿ ಬರುವಾಗ ಮದ್ಯದ ನಶೆಯಲ್ಲಿ ಬ್ಯಾಟ್​ನಿಂದ ಮನೆ‌ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದಿದ್ದರು. ರಾಜರಾಜೇಶ್ವರಿ ನಗರ ಹಾಗೂ‌ ಕೆಂಗೇರಿ ಪೊಲೀಸ್​ ಠಾಣೆ ವ್ಯಾಪ್ತಿ ಸೇರಿದಂತೆ 14 ಕಾರುಗಳ ಗಾಜು ಜಖಂ ಮಾಡಿದ್ದರು.‌
ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಬಂಧಿತರಲ್ಲಿ ಮೂವರು ಸ್ಥಳೀಯ ಅಪಾರ್ಟ್​​ಮೆಂಟ್ ಹಾಗೂ ಮತ್ತಿಬ್ಬರು ಹಾಸ್ಟೆಲ್​ನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments