ಸ್ಯಾಂಡಲ್ ವುಡ್ ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮೀಟೂ ಪ್ರಕರಣ

Webdunia
ಬುಧವಾರ, 1 ಡಿಸೆಂಬರ್ 2021 (19:37 IST)
ಬೆಂಗಳೂರು: ಸ್ಯಾಂಡಲ್ ವುಡ್ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮೀಟೂ ಪ್ರಕರಣದಲ್ಲಿ ಕಬ್ಬನ್ ಪಾರ್ಕ್​ ಪೊಲೀಸರು ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆ ನ್ಯಾಯಾಲಯಕ್ಕೆ ಬಿ ರಿಪೋರ್ಟ್​ ಸಲ್ಲಿಸಿದ್ದಾರೆ.
ಕಳೆದ‌ ಮೂರು ವರ್ಷಗಳ ಹಿಂದೆ ನಟ ಅರ್ಜುನ್ ಸರ್ಜಾ ವಿರುದ್ಧ ಕೇಳಿ ಬಂದಿದ್ದ ಮೀಟೂ ಆರೋಪದಲ್ಲಿ ನಟಿ ಶ್ರುತಿ ಹರಿಹರನ್​ಗೆ ಹಿನ್ನಡೆಯಾಗಿದೆ.
ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ದೂರು ನೀಡಿದ್ದರು. ವಿಸ್ಮಯ ಸಿನಿಮಾದ ಚಿತ್ರೀಕರಣ ವೇಳೆ ಅರ್ಜುನ್ ಸರ್ಜಾ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು 2018ರಲ್ಲಿ ಶ್ರುತಿ ಹರಿಹರನ್ ಆರೋಪಿಸಿದ್ದರು. ಬಳಿಕ ತನಿಖೆ ಕೈಗೆತ್ತಿಕೊಂಡ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಸ್ಮಯ ಚಿತ್ರದ ನಿರ್ದೇಶಕ, ನಿರ್ಮಾಪಕ, ಛಾಯಾಗ್ರಾಹಕರನ್ನು ಸಾಕ್ಷಿಯಾಗಿ ಹೇಳಿಕೆ ಪಡೆಯಲಾಗಿತ್ತು. ಆದರೆ, ಅರ್ಜುನ್ ಸರ್ಜಾ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಿಗಳು ಸಿಕ್ಕಿರಲಿಲ್ಲ. ಪೂರಕ ಸಾಕ್ಷಿ ಒದಗಿಸುವಲ್ಲಿ ಸ್ವತಃ ಶ್ರುತಿ ಹರಿಹರನ್ ಸಹ ವಿಫಲರಾಗಿದ್ದರು.
ಪ್ರಕರಣ ದಾಖಲಾದ ಮೂರು ವರ್ಷದ ಬಳಿಕ ಶ್ರುತಿ ಹರಿಹರನ್​ಗೆ ಸಿಆರ್​​​ಪಿಸಿ 159ರ ಅಡಿ ಮತ್ತೆ ನೋಟಿಸ್ ನೀಡಲಾಗಿತ್ತು. ಸೂಕ್ತ ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್​ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Bihar election result live: ಬಿಹಾರದಲ್ಲಿ ಎನ್ ಡಿಎ ಹೇಗೆ ಗೆಲ್ತಿದೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ