Select Your Language

Notifications

webdunia
webdunia
webdunia
webdunia

ಬಿಸಿಲೂರಲ್ಲಿ ಮಹಾತ್ಮನ ಸ್ಮರಣೆ

ಬಿಸಿಲೂರಲ್ಲಿ ಮಹಾತ್ಮನ ಸ್ಮರಣೆ
ಕಲಬುರ್ಗಿ , ಮಂಗಳವಾರ, 2 ಅಕ್ಟೋಬರ್ 2018 (16:43 IST)
ಮಹಾತ್ಮ ಗಾಂಧೀಜಿಯವರ 150 ನೇ ಜನ್ಮ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಕಲಬುರಗಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತ ಸೇವಾ ದಳ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ವತಿಯಿಂದ ಕಲಬುರ್ಗಿಯ ಮಿನಿ ವಿಧಾನಸೌಧದ ಆವರಣದಲ್ಲಿ ಗಾಂಧಿ ಜಯಂತಿ   ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಅಪೂರ್ವ ಛಾಯಚಿತ್ರ, ಸಾಕ್ಷ್ಯ ಚಿತ್ರ ಮತ್ತು ಗಾಂಧೀಜಿಯ ವಿಶೇಷಾಂಕ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಮಾಲಾಜಿ, ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಮತ್ತಿತರರು ಉಪಸ್ಥಿತರಿದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂಗೆ ಸಚಿವ ಬರೆದ ಪತ್ರದಲ್ಲೇನಿದೆ ಗೊತ್ತಾ?