Select Your Language

Notifications

webdunia
webdunia
webdunia
webdunia

ಮಾರಕ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದ ಸಚಿವ

ಮಾರಕ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದ ಸಚಿವ
ಬೆಂಗಳೂರು , ಸೋಮವಾರ, 5 ನವೆಂಬರ್ 2018 (19:16 IST)
ರಾಜ್ಯದಲ್ಲಿ ಹೆಚ್ – 1 ಎನ್ – 1 ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಹೇಳಿದ್ದಾರೆ.

ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದು, ಬೆಂಗಳೂರಿನಲ್ಲಿ ಹೆಚ್ – 1 ಎನ್ – 1 ಹಾವಳಿ ಹೆಚ್ಚಾಗಿತ್ತು. ಈಗ ಅದು ನಿಯಂತ್ರಣಕ್ಕೆ ಬಂದಿದೆ. ಹೆಚ್ – 1 ಎನ್ – 1 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಬಾರಿ ಅರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸಲಹೆ, ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಹೆಚ್ – 1 ಎನ್ – 1 ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ರೋಗ ಹರಡದಂತೆ ಕಟ್ಟೆಚ್ಚರ ವಹಿಸಿರುವುದಾಗಿಯೂ ಅವರು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ತಂದೆ-ಅಜ್ಜಿಯನ್ನೇ ಕೊಲೆ ಮಾಡಿ ಕಥೆ ಹೆಣೆದ ಭೂಪ ಅಂದರ್