ಕೈ ಶಾಸಕರ ಜಗಳಕ್ಕೆ ಬಿಜೆಪಿ ಕಾರಣ ಎಂದ ಸಚಿವ

Webdunia
ಶನಿವಾರ, 26 ಜನವರಿ 2019 (15:35 IST)
ರೆಸಾರ್ಟ್​ನಲ್ಲಿ ಕಾಂಗ್ರೆಸ್ ಶಾಸಕರು ಬಡಿದಾಡಿಕೊಂಡಿರುವುದಕ್ಕೆ ಬಿಜೆಪಿ ಕಾರಣವೆಂದು ಸಚಿವರೊಬ್ಬರು ಹೇಳಿಕೆ ಕೊಟ್ಟಿದ್ದಾರೆ.

ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ಕೈಗೊಂಡಿದ್ದ ಬರ ಅಧ್ಯಯನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರನ್ನು ಬಿಜೆಪಿಯವರು ಕರೆದೊಯ್ಯಲು ಪ್ರಯತ್ನ ಮಾಡಿದ್ದರಿಂದಲೇ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಆಪರೇಶನ್ ಕಮಲ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಮತ್ತು ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಂದಾಗಿದ್ದಾರೆ. ಆಡಳಿತ ಪಕ್ಷದ ಎಲ್ಲಾ ಶಾಸಕರ ಜೊತೆಗೂ ಬಿಜೆಪಿ ಮಾತುಕತೆಗೆ ಯತ್ನಿಸಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ಪ್ರತಿಪಕ್ಷ ರಚನಾತ್ಮಕ ಕೆಲಸ ಮಾಡಿಲ್ಲವೆಂದು ಜಿಟಿಡಿ ವಾಗ್ದಾಳಿ ನಡೆಸಿದರು.

ಬಿಜೆಪಿ ತನ್ನ ಶಾಸಕರನ್ನು ದೆಹಲಿ, ಮುಂಬೈ, ಹರಿಯಾಣದಲ್ಲಿ ಇರಿಸಿಕೊಂಡಿತ್ತು. ಆದ್ರೆ ರಾಜ್ಯ ಸರ್ಕಾರ ಬರ ಪರಿಸ್ಥಿತಿ ನಿಭಾಯಿಸಲು ಬದ್ಧವಾಗಿದೆ ಎಂದು ಬಿಜೆಪಿ ಆರೋಪಗಳಿಗೆ ಸಚಿವರು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments