Select Your Language

Notifications

webdunia
webdunia
webdunia
webdunia

ಚಿಂಚನಸೂರು ಕೈಕೊಟ್ಟಿದ್ದಕ್ಕೆ ನಷ್ಟವೇನೂ ಇಲ್ಲ ಎಂದ ಸಚಿವ

ಚಿಂಚನಸೂರು ಕೈಕೊಟ್ಟಿದ್ದಕ್ಕೆ ನಷ್ಟವೇನೂ ಇಲ್ಲ ಎಂದ ಸಚಿವ
ಕಲಬುರಗಿ , ಬುಧವಾರ, 29 ಆಗಸ್ಟ್ 2018 (20:05 IST)
ಇಷ್ಟು ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿದ್ದುಕೊಂಡು ಈಗ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಸಚಿವ ಬಾಬುರಾವ ಚಿಂಚನಸೂರ ಕಮಲ ಪಾಳೆಯ ಸೇರ್ಪಡೆಗೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೇಳಿದ್ದಾರೆ.

ಮಾಜಿ ಸಚಿವ ಬಾಬುರಾವ ಚಿಂಚನಸೂರ ಕಾಂಗ್ರೆಸ್ ತೊರೆದಿರುವುದರಿಂದ ಯಾವುದೇ ನಷ್ಟವಿಲ್ಲ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಬಿಜೆಪಿಗೆ ಮಾಜಿ ಸಚಿವ ಬಾಬುರಾವ ಚಿಂಚನಸೂರ ಸೇರ್ಪಡೆಗೊಂಡಿದ್ದಾರೆ. ಅವರು ಪಕ್ಷ ತ್ಯಜಿಸಿರುವುದರಿಂದ ಪಕ್ಷಕ್ಕೆ ಯಾವುದೇ ರೀತಿಯಲ್ಲಿ ನಷ್ಟವಾಗುವುದಿಲ್ಲ. ಮುಂಬರುವ ಲೋಕಸಭೆ ಚುನಾವಣೆ ಮೇಲೆಯೂ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಅವರು ಹೇಳಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಗೆ ಜೈ ಎಂದ ಚಿಂಚನಸೂರ