ದೇವೇಗೌಡರ ಕುಟುಂಬವನ್ನು ಹೊಗಳುವ ಭರದಲ್ಲಿ ಎಡವಟ್ಟು ಹೇಳಿಕೆ ನೀಡಿದ ಸಚಿವ

Webdunia
ಶುಕ್ರವಾರ, 22 ಮಾರ್ಚ್ 2019 (09:17 IST)
ತುಮಕೂರು : ಜೆಡಿಎಸ್ ವರಿಷ್ಠ ಎಚ್‍.ಡಿ ದೇವೇಗೌಡರು ಚುನಾವಣೆ ಸ್ಪರ್ಧಿಸುವ ವಿಚಾರದ ಕುರಿತು ಮಾತನಾಡುವಾಗ ಸಣ್ಣ ಕೈಗಾರಿಕಾ ಸಚಿವ ಎಸ್‍.ಆರ್. ಶ್ರೀನಿವಾಸ್  ಅವರು ದೇವೇಗೌಡರ ಕುಟುಂಬವನ್ನು ಹೊಗಳುವ ಭರದಲ್ಲಿ ಎಡವಟ್ಟು ಹೇಳಿಕೆಯೊಂದನ್ನು ನೀಡಿದ್ದಾರೆ.


ಮೈತ್ರಿಗಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಒಮ್ಮತ ಮೂಡದ ಪರಿಣಾಮ ಇಂದು ಕಾಂಗ್ರೆಸ್ ನಾಯಕರ ಬೆಂಬಲ ಕೋರಿ ಸಚಿವ ಶ್ರೀನಿವಾಸ್ ಮಾಜಿ ಕಾಂಗ್ರೆಸ್ ಶಾಸಕರಾದ ರಫಿಕ್ ಅಹಮದ್ ಅವರ ಮನೆಗೆ ಭೇಟಿ ನೀಡಿ ಸಭೆ ನಡೆಸಿದ್ದರು. ಆ ವೇಳೆ ಬೆಂಗಳೂರು ಉತ್ತರದಲ್ಲಿ ಸೋಲುವ ಭೀತಿಯಿಂದ ತುಮಕೂರಿನಿಂದ ಸ್ಪರ್ಧೆ ಮಾಡುತ್ತಾ ಇದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್‍.ಆರ್ ಶ್ರೀನಿವಾಸ್  ಅವರು,’ ದೇವೇಗೌಡರ ಕುಟುಂಬ ರಾಕ್ಷಸ ಕುಟುಂಬ. ಅವರು ಯಾವುದಕ್ಕೂ ಅಂಜುವವರಲ್ಲ. ಸೋಲಲಿ-ಗೆಲ್ಲಲಿ ಹೋರಾಟ ಮಾಡೇ ಮಾಡುತ್ತಾರೆ ಎಂದು ದೊಡ್ಡಗೌಡರ ಕುಟುಂಬ ಹೊಗಳಲು ಹೋಗಿ ಎಡವಟ್ಟು ಮಾಡಿದ್ದಾರೆ.


ದೇವೇಗೌಡರು 60 ವರ್ಷದ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು ಬೀಳು ಕಂಡಿದ್ದಾರೆ. ಈ ಬಾರಿ ಅವರು ಎಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ. ಮಾಜಿ ಪ್ರಧಾನಿ ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಒತ್ತಡ ಹಾಕಿದ್ದೇವೆ. ನಮ್ಮ ಪಕ್ಷದಿಂದ ದೇವೇಗೌಡರೆ ಅಭ್ಯರ್ಥಿಯಾಗಿದ್ದು, 25 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments