ಬೆಂಗಳೂರಿನ ಕುರುಬರಹಳ್ಳಿಯ ಕಾವೇರಿ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಮತ್ತು ಬೈಕ್ಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿ ಪರಾರಿಯಾಗಿದ್ದಾರೆ. ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ವಾಹನಗಳು ಇವಾಗಿವೆ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆ XUV ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಿಡಿಗೇಡಿಗಳ ಕೃತ್ಯ CCTVಯಲ್ಲಿ ಸೆರೆಯಾಗಿದೆ. ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.