Select Your Language

Notifications

webdunia
webdunia
webdunia
webdunia

ಮುಂಗಾರಿನ ಅಬ್ಬರ ಮುಗಿದ ಬೆನ್ನಲೇ ರಾಜ್ಯದಲ್ಲಿ ಹಿಂಗಾರು ಮಳೆ ಶುರು

The monsoon rains have hit the state
bangalore , ಗುರುವಾರ, 21 ಅಕ್ಟೋಬರ್ 2021 (21:06 IST)
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 25ರವರೆಗೂ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 
 
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದರೂ ಇಂದಿನಿಂದ  ಹಿಂಗಾರು ಮಳೆಯ ಅಬ್ಬರ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ​ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದೆ.  
 
ನಗರದಲ್ಲಿ ಯೆಲ್ಲೋ ಅಲರ್ಟ್: 
 
ಬೆಂಗಳೂರಿನಲ್ಲಿ ಮಳೆ ತುಸು ಕಡಿಮೆಯಾಗಿದ್ದರೂ, ಮುಂದಿನ ದಿನಗಳಲ್ಲಿ ಅಬ್ಬರ ಮತ್ತೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಅ.21, 22 ಮತ್ತು 24ರಂದು ರಾಜಧಾನಿಗೆ ಹವಾಮಾನ ಇಲಾಖೆಯು ಯೆಲ್ಲೊ ಅಲರ್ಟ್‌ ನೀಡಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬಿ.ಜೆ.ಪಿ ಸೋಲಿನ ಭೀತಿ