Select Your Language

Notifications

webdunia
webdunia
webdunia
webdunia

ರಾತ್ರಿ ತಡವಾಗಿ ಬಂದ ಮಗನಿಗೆ ಬುದ್ಧಿವಾದ ಹೇಳಿದ ತಾಯಿ: ಮಗ ಹೀಗೆ ಮಾಡೋದಾ?

ರಾತ್ರಿ ತಡವಾಗಿ ಬಂದ ಮಗನಿಗೆ ಬುದ್ಧಿವಾದ ಹೇಳಿದ ತಾಯಿ: ಮಗ ಹೀಗೆ ಮಾಡೋದಾ?
ಚಿಕ್ಕಬಳ್ಳಾಪುರ , ಗುರುವಾರ, 17 ಆಗಸ್ಟ್ 2023 (13:15 IST)
ಚಿಕ್ಕಬಳ್ಳಾಪುರ : ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

ಮೃತ ಯುವಕನನ್ನು ಉಜ್ವಲ್ (18) ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಾಗಿದ್ದ. ಯುವಕ ಮನೆಯಲ್ಲಿ ಮೌನವಾಗಿರುತ್ತಿದ್ದ. ಹೆಚ್ಚಾಗಿ ಮೊಬೈಲ್ನಲ್ಲೇ ಕಾಲ ಕಳೆಯುತ್ತಿದ್ದ. ಈ ವಿಚಾರವಾಗಿ ಅವನ ತಾಯಿ ಹಲವಾರು ಬಾರಿ ಬುದ್ಧಿವಾದ ಹೇಳಿದ್ದರು.

ಅಲ್ಲದೇ ಬುಧವಾರ ರಾತ್ರಿ ತಡವಾಗಿ ಮನೆಗೆ ಬಂದಿದ್ದಾನೆ. ಇದಕ್ಕಾಗಿ ಯುವಕನ ತಾಯಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿ ಬುದ್ಧಿವಾದ ಹೇಳಿದ್ದರು. ಬಳಿಕ ರಾತ್ರಿ ಊಟ ಮಾಡಿ, ತನ್ನ ಕೋಣೆಯ ಒಳಗೆ ಹೋಗಿದ್ದ. 

ಬೆಳಗ್ಗೆ 7 ಗಂಟೆಯಾದರೂ ಬಾಗಿಲು ತೆರೆಯದಿದ್ದಾಗ ಯುವಕನ ಸಹೋದರ ಬಾಗಿಲು ಬಡಿದಿದ್ದಾನೆ. ಬಳಿಕ ಬೀಗ ಹಾಕುವ ರಂಧ್ರದಲ್ಲಿ ಇಣುಕಿ ನೋಡಿದಾಗ ನೇಣು ಬಿಗಿದು ಕೊಂಡಿರುವುದು ಕಂಡು ಬಂದಿದೆ. ತಕ್ಷಣ ತನ್ನ ಮಾವಂದಿರಿಗೆ ಮಾಹಿತಿ ನೀಡಿ, ಅಕ್ಕಪಕ್ಕದವರನ್ನು ಕರೆದು ಬಾಗಿಲು ತೆರೆಯಲು ಪ್ರಯತ್ನ ಮಾಡಿದ್ದಾರೆ. ಒಳಗಿನಿಂದ ಲಾಕ್ ಮಾಡಿದ್ದ ಕಾರಣ ತೆರೆಯಲು ಸಾಧ್ಯವಾಗಿಲ್ಲ. ಬಳಿಕ ಬಾಗಿಲನ್ನು ಒಡೆದಿದ್ದಾರೆ. ಈ ವೇಳೆ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ