Select Your Language

Notifications

webdunia
webdunia
webdunia
webdunia

ಹೈಕಮಾಂಡ್‌ನತ್ತ ಸಿಎಂ ಸಿದ್ದರಾಮಯ್ಯ, ಡಿಕೆಶಿ: ಕುತೂಹಲ ಸೃಷ್ಟಿಸಿದ ನಾಯಕರ ನಡೆ

Chief Minister Siddaramaiah

Sampriya

ಬೆಂಗಳೂರು , ಭಾನುವಾರ, 28 ಜುಲೈ 2024 (13:00 IST)
Photo Courtesy X
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮ ಹಗರಣಗಳು ಜೋರಾಗಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಂಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಷ್ಟ್ರ ರಾಜಧಾನಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಜುಲೈ 29ರಂದು  ನವದೆಹಲಿಗೆ ಹೊರಟಿರುವ ಸಿಎಂ ಸಿದ್ದರಾಮಯ್ಯ, ಶಿವಕುಮಾರ್ ದಿಢೀರ್ ಭೇಟಿ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮೂಲಗಳ ಮಾಹಿತಿ ಪ್ರಕಾರ ಈ ಭೇಟಿ ರಾಜ್ಯ ರಾಜಕರಾಣದಲ್ಲಿ ನಡೆಯುತ್ತಿರುವ ಪ್ರಸ್ತುತ ವಿಚಾರಗಳ ಬಗ್ಗೆ ಸಂಬಂಧಿಸಿದ್ದಲ್ಲ. ರಾಜ್ಯದಲ್ಲಿ ಬಾಕಿ ಉಳಿದಿರುವ ಯೋಜನೆಗಳ ಬಗ್ಗೆ ಕೇಂದ್ರದ ನಾಯಕರೊಂದಿಗೆ ಚರ್ಚಿಸುವ ಸಲುವಾಗಿದೆ. ಈ ಭೇಟಿ ಪೂರ್ವ ಯೋಜಿತವಾದದ್ದು ಎಂದು ಮೂಲಗಳು ತಿಳಿಸಿವೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಪ್ರಮುಖ ವಿಚಾರಗಳು ಚರ್ಚೆಯಾಗುವ ಸಾಧ್ಯತೆಯಿದೆ.  

ಹೈಕಮಾಂಡ್ ಭೇಟಿ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆ ತರುತ್ತಿರುವ ವಿಚಾರಗಳ ಕುರಿತು ಚರ್ಚೆಯಾಗುವ ಸಾಧ್ಯತೆಗಳಿವೆ ಎಂದೂ ಮೂಲಗಳು ತಿಳಿಸುವೆ.




Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರ ರಾಜಧಾನಿಯಲ್ಲಿ ಮಹಾಮಳೆ: ಐಎಎಸ್ ಸೆಂಟರ್‌ರೊಳಗೆ ನುಗ್ಗಿದ ನೀರು, ಮೂವರು ಸಾವು