Publish Date: Sun, 15 Feb 2026 (14:06 IST)
Updated Date: Sun, 15 Feb 2026 (14:08 IST)
ಬೆಂಗಳೂರು:ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಶಾಸಕ ಬೈರತಿ ಬಸವರಾಜ್‌ಗೆ ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ.
ಬೈರತಿ ಬಸವರಾಜ್ ಅವರನ್ನು ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.
ಈ ವೇಳೆ ಶಾಸಕರ ಆಂಜಿಯೋಗ್ರಾಮ್ ರಿಪೋರ್ಟ್‌ನ್ನು ನ್ಯಾಯಾಧೀಶರಿಗೆ ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಸಲ್ಲಿಸಿದರು. ವರದಿಯನ್ನು ಪರಿಶೀಲಿಸಿ, ವಿಚಾರಣೆ ನಡೆಸಿದ ನ್ಯಾಯಾಧೀಶರು, ಭೈರತಿ ಬಸವರಾಜ್ ಅವರನ್ನು 7 ದಿನಗಳ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಫೆ.12 ರಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್ ಅವರನ್ನು ಪೊಲೀಸರು ವಶಕ್ಕ ಪಡೆದಿದ್ದರು. ಮರುದಿನ ಆರೋಗ್ಯ ತಪಾಸಣೆ ನಡೆಸಿದ್ದ ವೇಳೆ ಅವರಿಗೆ ಇಸಿಜಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರಿಗೆ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್ ಮಾಡಿಸಲಾಗಿತ್ತು.
ಇನ್ನೂ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಸುಪ್ರೀಂ ಕದ ತಟ್ಟಿದ ಬಸವರಾಜ್‌ಗೆ ಅಲ್ಲೂ ಹಿನ್ನಡೆಯಾಗಿತ್ತು.