ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

Webdunia
ಭಾನುವಾರ, 12 ಮೇ 2019 (10:38 IST)
ದಾವಣಗೆರೆ : ದಾವಣಗೆರೆ ನಗರದ ಹೈಟೆಕ್ ಆಸ್ಪತ್ರೆಯ ಹಿಂಭಾಗವಿರುವ ಕೆಎಸ್‌ ಆರ್‌ ಟಿಸಿ ಬಸ್ ಡಿಪೋ ಬಳಿ ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.




ನಾಗರಾಜ್ ಅಲಿಯಾಸ್ ಬುಳ್ ನಾಗ(30) ಹತ್ಯೆಯಾದ ರೌಡಿಶೀಟರ್. ಈ ಹಿಂದೆ ಮೂರು ಬಾರಿ ಈತನ ಮೇಲೆ ದಾಳಿ ನಡೆದಿದ್ದು, ಆ ವೇಳೆ ನಾಗ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದನು. ಆದರೆ ಇಂದು ಬುಳ್ ನಾಗ ತನ್ನ ಸಹಚರರೊಂದಿಗೆ ಬೈಕಿನಲ್ಲಿ ಬರುತ್ತಿದ್ದಾಗ ದುಷ್ಕರ್ಮಿಗಳು ನಾಗನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹಳೆ ವೈಷಮ್ಯವೇ ಕೊಲೆಗೆ ಕಾರಣ ಎನ್ನಲಾಗುತ್ತಿದೆ.


ಈ ಕುರಿತು ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯರೂ ದೇವರಾಜ ಅರಸರ ಹತ್ತಿರ ಬರಲು ಕೂಡಾ ಆಗಲ್ಲ: ಪ್ರತಾಪ್ ಸಿಂಹ ಕಿಡಿ

ಎಸ್‍ಐಆರ್ ಅನ್ನು ಎಫ್‍ಐಆರ್ ಎಂದು ಭಾವಿಸಿದರೇ: ಅಧಿಕಾರಿಗಳಿಗೆ ಪ್ರಲ್ಹಾದ ಜೋಶಿ ಪ್ರಶ್ನೆ

ಜಿ ರಾಮ್ ಜಿ ವಿರುದ್ಧ ಯಾವ ಪುರುಷಾರ್ಥಕ್ಕಾಗಿ ಕಾಂಗ್ರೆಸ್ಸಿನವರ ಹೋರಾಟ: ಪ್ರಲ್ಹಾದ ಜೋಶಿ

ಮದುವೆ ಮಾಡಿಸದ ಕೋಪಕ್ಕೆ ತಂದೆಯನ್ನೇ ಮುಗಿಸಿದ ಪಾಪಿ ಮಗ

ಭಾರತಕ್ಕೆ ದೊಡ್ಡ ಹೊಡೆತ, ಟಿ20 ವಿಶ್ವಕಪ್‌ಗೆ ತಿಲಕ್ ವರ್ಮಾ ಆಡೋದು ದೌಟ್‌

ಮುಂದಿನ ಸುದ್ದಿ
Show comments